ವಾಲ್ಮೀಕಿ ನಿಗಮದ ಮೃತ ಚಂದ್ರಶೇಖರನ್ ಕುಟುಂಬಸ್ಥರಿಗೆ 25 ಲಕ್ಷ ರೂ. ಚೆಕ್ ವಿತರಣೆ

Written by Mahesh Hindlemane

Published on:

BANGALORE ; ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಗಳವಾರ ಬೆಂಗಳೂರಿನ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ 25 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದರು.

WhatsApp Group Join Now
Telegram Group Join Now
Instagram Group Join Now

ಚಂದ್ರಶೇಖರನ್ ಕುಟುಂಬದ ಜೊತೆಗೆ ನಿಲ್ಲುವೆ :

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚಂದ್ರಶೇಖರನ್ ಆತ್ಮಹತ್ಯೆ ದುರದೃಷ್ಟಕರ ಘಟನೆ. ಸರ್ಕಾರ ಅವರ ಕುಟುಂಬದ ನೋವಿಗೆ ಸ್ಪಂದಿಸಿದೆ ಮತ್ತು ಯಾವತ್ತೂ ಜೊತೆಗಿರಲಿದೆ ಎಂದು ಹೇಳಿದರು. ಚಂದ್ರಶೇಖರನ್ ಪತ್ನಿ, ಪುತ್ರರು ಪರಿಹಾರದ ಚೆಕ್‌ ಪಡೆದು ಸಿಎಂ ಆಶೀರ್ವಾದ ಪಡೆದರು.

ಸರ್ಕಾರ ಕೊಟ್ಟ ಹಣ ಅಪವ್ಯಯವಾಗದಂತೆ ನೋಡಿಕೊಳ್ಳಿ :

ಚಂದ್ರಶೇಖರನ್ ಕುಟುಂಬಕ್ಕೆ ಸಾಂತ್ವನ ಹೇಳಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಯಾವುದೇ ಮನೆಯಲ್ಲಿ ಸಾವಾಗಬಾರದು. ಆದ ದುರ್ಘಟನೆ ಮತ್ತೆ ಮರುಕಳಿಸದಂತೆ ನೋಡಿಕೊಳ್ಳುವುದು ನಾಗರಿಕ ಸಮಾಜದ ಕರ್ತವ್ಯ. ನಿಮ್ಮ ಕುಟುಂಬಕ್ಕೆ ಸರ್ಕಾರ ನೀಡಿದ ಭರವಸೆಯಂತೆ ನಡೆದುಕೊಂಡಿದೆ. ಸಾಂತ್ವನ ಹೇಳಲು ಮನೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪರಿಹಾರ ಕೊಡಿಸುವಂತೆ ಭರವಸೆ ನೀಡಿದ್ದೆ. ಅದರಂತೆ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಪರಿಹಾರ ನೀಡಲಾಗಿದೆ. ಸರ್ಕಾರ ಕೊಟ್ಟ ಹಣ ಅಪವ್ಯಯವಾಗದಂತೆ ನೋಡಿಕೊಳ್ಳಿ. ಮಕ್ಕಳ ಭವಿಷ್ಯಕ್ಕೆ ಒಂದು ಮಾರ್ಗ ತೋರಿಸಿ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಶಾಸಕ ಎಸ್‌.ಎನ್. ಚನ್ನಬಸಪ್ಪ, ಭೋವಿ ಪೀಠದ ಸಿದ್ಧರಾಮೇಶ್ವರ ಸ್ವಾಮೀಜಿ, ರಾಜ್ಯ ಭೋವಿ ನಿಗಮದ ಅಧ್ಯಕ್ಷ ಎಸ್‌. ರವಿಕುಮಾರ್‌, ಚಂದ್ರಶೇಖರನ್ ಕುಟುಂಬದ ಆಪ್ತ ಭೂಪಾಲ್‌ ಮತ್ತಿರರು ಇದ್ದರು.

Leave a Comment