ಶಿವಮೊಗ್ಗ ; ವೈಯಕ್ತಿಕ ವಿಚಾರಕ್ಕೆ ಸ್ನೇಹಿತರಿಬ್ಬರ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ವಿರುಪಿನಕೊಪ್ಪ ಕ್ಯಾಂಪ್ ನಲ್ಲಿ ಮಂಗಳವಾರ ನಡೆದಿದೆ.
ಶಿವಮೊಗ್ಗ ತಾಲೂಕಿನ ತ್ಯಾವರೆಕೊಪ್ಪದ ನಿವಾಸಿಯಾದ ದೇವರಾಜ್ (31) ಹತ್ಯೆಯಾದ ವ್ಯಕ್ತಿ. ವೆಂಕಟೇಶ್ ಸ್ನೇಹಿತನನ್ನು ಹತ್ಯೆಗೈದ ಆರೋಪಿ.
ದೇವರಾಜ್ ಮತ್ತು ವೆಂಕಟೇಶ್ ಇಬ್ಬರು ಸ್ನೇಹಿತರಾಗಿದ್ದು ವೈಯಕ್ತಿಕ ವಿಚಾರಕ್ಕೆ ಇಬ್ಬರ ನಡುವೆ ಜಗಳ ಶುರುವಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಸಿಟ್ಟಿಗೆದ್ದ ವೆಂಕಟೇಶ್ ಗುದ್ದಲಿಯಿಂದ ದೇವರಾಜ್ ತಲೆಗೆ ಹೊಡೆದಿದ್ದಾನೆ ಗಂಭೀರ ಗಾಯಗೊಂಡ ದೇವರಾಜ್ ಕುಸಿದುಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ವೆಂಕಟೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.