ಭದ್ರಾವತಿ

ಜಮೀನಿನಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ !

ಶಿವಮೊಗ್ಗ ; ಜಮೀನಿನಲ್ಲಿದ್ದ ವಿದ್ಯುತ್ ಪರಿವರ್ತಕ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಜಿಲ್ಲೆಯ ಭದ್ರಾವತಿಯ ದೊಡ್ಡೇರಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಾಂತಕುಮಾರ (35) ಕೊಲೆಯಾದ ದುರ್ದೈವಿ. ಲೇಪಾಕ್ಷಿ ಎನ್ನುವ ವ್ಯಕ್ತಿ ಹಾಗೂ ಮತ್ತೋರ್ವ ಸೇರಿ ಶಾಂತಕುಮಾರನ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಜಮೀನಿನಲ್ಲಿದ್ದ ವಿದ್ಯುತ್ ಪರಿವರ್ತಕ ವಿಚಾರಕ್ಕೆ ಬುಧವಾರ ಸಂಜೆ ಜಗಳ ನಡೆದಿತ್ತು. ಗಲಾಟೆ ವಿಪರೀತಕ್ಕೆ ಹೋಗಿ ರಾತ್ರಿ ಮಚ್ಚಿನಿಂದ ಹಲ್ಲೆ ಮಾಡಿ ಇಬ್ಬರು ಆರೋಪಿಗಳು ಕೊಲೆ ಮಾಡಿದ್ದಾರೆ. ಬುಧವಾರ ರಾತ್ರಿಯೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>