ರಿಪ್ಪನ್‌ಪೇಟೆ ; ಸುಧೀರ್ಘ 28 ವರ್ಷಗಳ ಕಾಲ ಸಾರ್ಥಕ ದೇಶ ಸೇವೆ ಮಾಡಿ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಮರಳಿದ ಸುಬೇದಾರ್ ಕೃಷ್ಣಮೂರ್ತಿ ಎನ್.ಬಿ. ಇವರಿಗೆ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಅದ್ಧೂರಿಯಾಗಿ ಗ್ರಾಮಸ್ಥರು, ಅಭಿಮಾನಿಗಳು ಸ್ವಾಗತಿಸಿ ಶುಭ ಹಾರೈಸಿದರು.

ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ ಮಾರ್ಗ ಮಧ್ಯ ನಿವೃತ್ತ ಯೋಧ ಕೃಷ್ಣಮೂರ್ತಿಯವರನ್ನು ಸ್ವಾಗತಿಸಿ ಅಭಿನಂದಿಸಿ ನಿಮ್ಮ ನಿವೃತ್ತಿ ಜೀವನ ಸುಖಮಯವಾಗಲೆಂದು ಹಾರೈಸಿ ಅಭಿನಂದಿಸಿದರು. ನಂತರ ತೆರೆದ ವಾಹನದಲ್ಲಿ ಯೋಧ ಕೃಷ್ಣಮೂರ್ತಿ ಎನ್.ಬಿ. ಇವರನ್ನು ಮೆರವಣಿಗೆಯಲ್ಲಿ ಸಿದ್ದಿವಿನಾಯಕ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಸ್ವಗ್ರಾಮ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗಾಮನಗದ್ದೆ ಕರೆದೊಯ್ಯಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಜಿಲ್ಲಾ ಘಟಕದ ಆಧ್ಯಕ್ಷ ನಾಗೇಶ್, ಮಹಿಳಾ ಘಟಕದ ಅಧ್ಯಕ್ಷೆ ವೇದಾವತಿ, ಲೇಖನ ಚಂದ್ರಶೇಖರ್, ಸುಶೀಲ ಮೂಡಾಗ್ರೆ, ಸೀತ ರಾಜಪ್ಪ, ಇನ್ನಿತರರು ಪಾಲ್ಗೊಂಡಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.