ತರೀಕೆರೆ ; ಆಟವಾಡುತ್ತಿದ್ದ ಮಗುವನ್ನು ಚಿರತೆಯೊಂದು ಹೊತ್ತೊಯ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮುಂಡ್ರೆ ಸಮೀಪದ ನವಿಲೇಕಲ್ ಗುಡ್ಡ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.

ತೋಟದ ಮನೆಯ ಕೆಲಸಗಾರ ಬಸವರಾಜ ಮತ್ತು ರೇಣುಕಾ ದಂಪತಿಯ ಪುತ್ರಿ ಸಾನ್ವಿ (05) ಮೃತ ಮಗು. ಬೆಂಗಳೂರಿನ ರಾಮಚಂದ್ರಪ್ಪ ಎಂಬುವರಿಗೆ ಸೇರಿದ ಅಡಿಕೆ ತೋಟದಲ್ಲಿ ಧಾರವಾಡದ ಈ ದಂಪತಿ ಕೆಲಸ ಮಾಡಿಕೊಂಡಿದ್ದಾರೆ. ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕಿಯನ್ನು ಎಳೆದೊಯ್ದಿದೆ. ಪಕ್ಕದಲ್ಲೇ ಇದ್ದ ತಂದೆ ಚಿರತೆ ಹಿಂದೆ ಓಡಿ ಹೋಗಿದ್ದು, ಚಿರತೆ ಮಗುವಿನೊಂದಿಗೆ ನಾಪತ್ತೆಯಾಗಿತ್ತು. ಸ್ಥಳೀಯರು ಹುಡುಕಾಡಿದಾಗ ಕಾಡಂಚಿನಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ.

ಈ ಕುರಿತು ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





