ರಿಪ್ಪನ್‌ಪೇಟೆ : ಹುಂಚ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಶೆಟ್ಟಿಬೈಲು ಬಿಲ್ಲೇಶ್ವರದಲ್ಲಿ ಮನೆಯಲ್ಲಿ ಸಾಕಿದ್ದ ನಾಯಿಯನ್ನು ಶುಕ್ರವಾರ ರಾತ್ರಿ ಚಿರತೆಯೊಂದು ಹೊತ್ತು ಹೋಗಿರುವ ಘಟನೆ ನಡೆದಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ.
ಹೊಸನಗರ ವಲಯ ಅರಣ್ಯ ವ್ಯಾಪ್ತಿಯ ಹುಂಚ ಬಳಿಯ ಶೆಟ್ಟಿಬೈಲು-ಬಿಲ್ಲೇಶ್ವರ ದೇವರಾಜ (ಮಲ್ಲಿಕಾರ್ಜುನಗೌಡ) ಎಂಬುವರ ಸಾಕು ನಾಯಿಯನ್ನು ಶುಕ್ರವಾರ ರಾತ್ರಿ ಸುಮಾರು 12 ಗಂಟೆಯ ಸುಮಾರಿಗೆ ಚಿರತೆ ಹೊತ್ತು ಹೋಗಿದೆ ಎಂದು ತಿಳಿದುಬಂದಿದೆ.
ಹುಂಚ ಗ್ರಾಮ ವ್ಯಾಪ್ತಿಯಲ್ಲಿ ಚಿರತೆ ಕಾಣಿಸಿಕೊಂಡಿರುವುದರಿಂದ ಸುತ್ತಮುತ್ತಲಿನ ಜನತೆ ಭಯಭೀತರಾಗಿದ್ದು ಈಗ ಮನೆಯ ಬಳಿ ಬಂದಿರುವುದು ಇನ್ನೂ ಹೆಚ್ಚು ಭಯಪಡುವಂತಾಗಿದೆ ಎಂದು ಗ್ರಾಮಸ್ಥರು ಮಾಧ್ಯಮದವರ ಬಳಿ ತಿಳಿಸಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
ಈಗಾಗಲೇ ಅರಣ್ಯ ಇಲಾಖೆ ಗಮನಕ್ಕೆ ತರಲಾದರೂ ಕೂಡಾ ಅಧಿಕಾರಿಗಳು ಇತ್ತಕಡೆ ತಲೆ ಹಾಕಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

