ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ !

Written by Mahesha Hindlemane

Published on:

ಮೂಡಿಗೆರೆ ; ತಾಲೂಕಿನ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯದ ಸಮೀಪದ ತಿರುವಿನಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಶುಕ್ರವಾರ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಕಡೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ತಿರುವಿನಲ್ಲಿ ಉರುಳಿದೆ.

ಘಟನೆಯಲ್ಲಿ ಲಾರಿ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕಾರಣ ಕೆಲಕಾಲ ಸಂಚಾರದಲ್ಲಿ ಅಡಚಣೆ ಉಂಟಾಯಿತು.

Leave a Comment