ರಿಪ್ಪನ್‌ಪೇಟೆ ; ಭತ್ತದ ಹುಲ್ಲು ಸಾಗಿಸುತ್ತಿದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಹೋದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಕಣಬಂದೂರು ಗ್ರಾಮದಲ್ಲಿ ನಡೆದಿದೆ.
ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/r/15vC9ykfx7/
ಕಣಬಂದೂರಿನ ಆಂಜನೇಯ ಸ್ವಾಮಿ ದೇವಸ್ಥಾನದ ಸಮೀಪದಲ್ಲಿ ಒಣ ಹುಲ್ಲಿನ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಲಾರಿ ಹೊತ್ತಿ ಉರಿದಿದೆ. ಸ್ಥಳೀಯರು, ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಆಯನೂರು ಮೂಲದ ವ್ಯಕ್ತಿಯೊಬ್ಬ ಕಣಬಂದೂರು, ಕರಡಿಗ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಒಣ ಹುಲ್ಲನ್ನು ಖರೀದಿಸಿ ಕೊಂಡೊಯ್ಯುತಿದ್ದಾಗ 11 ಕೆ.ವಿ. ವಿದ್ಯುತ್ ತಂತಿಗೆ ತಗುಲಿ ಈ ಅವಘಡ ಸಂಭವಿಸಿದ್ದು ಕ್ಷಣಾರ್ಧದಲ್ಲೇ ಲಾರಿ ಸಮೇತ ಸಂಪೂರ್ಣ ಹುಲ್ಲು ಸುಟ್ಟು ಭಸ್ಮವಾಗಿದೆ.

ವಿಷಯ ತಿಳಿಯುತಿದ್ದಂತೆ ತಕ್ಷಣ ಸ್ಥಳಕ್ಕಾಗಮಿಸಿದ ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳು ಸ್ಥಳೀಯರೊಂದಿಗೆ ಸೇರಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆ ನಂತರ ಹೊಸನಗರ ಅಗ್ನಿಶಾಮಕದಳ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಲಾರಿ ಹಾಗೂ ಹುಲ್ಲು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ.