CHIKKAMAGALURU ; ಲಾರಿಯೊಂದು ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ತುಂಡಾಗಿ ಲಾರಿಯ ಮೇಲೆ ಬಿದ್ದ ಘಟನೆ ಚಿಕ್ಕಮಗಳೂರು ನಗರದ ಎಐಟಿ ವೃತ್ತದಲ್ಲಿ ತಡರಾತ್ರಿ ಸಂಭವಿಸಿದೆ.
ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಲಾರಿ ಚಾಲಕನಿಗೆ ರಸ್ತೆ ಕಾಣದೆ ಡಿವೈಡರ್ ಮೇಲೇರಿದೆ ಈ ವೇಳೆ ಅಲ್ಲಿದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಪರಿಣಾಮ ವಿದ್ಯುತ್ ಕಂಬ ತುಂಡಾಗಿ ಲಾರಿಯ ಮೇಲೆಯೇ ಬಿದ್ದಿದೆ ಅದೃಷ್ಟವಶಾತ್ ಡಿಕ್ಕಿ ಹೊಡೆದ ಕೂಡಲೇ ಪವರ್ ಕಟ್ ಆದ ಹಿನ್ನೆಲೆಯಲ್ಲಿ ಸಂಭವನೀಯ ಅವಘಡ ತಪ್ಪಿದೆ, ಜೊತೆಗೆ ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಹೇಳಲಾಗಿದೆ.
ಮಹಾರಾಷ್ಟ್ರದಿಂದ ತರಕಾರಿ ಖರೀದಿಗಾಗಿ ಚಿಕ್ಕಮಗಳೂರಿಗೆ ಲಾರಿ ಬಂದಿತ್ತು ಎಂದು ಹೇಳಲಾಗಿದೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

