ಧಗಧಗನೆ ಹೊತ್ತಿ ಉರಿದ‌ ಚಲಿಸುತ್ತಿದ್ದ ಸರ್ಕಾರಿ ಬಸ್ !

Written by Mahesha Hindlemane

Updated on:

ಚಿಕ್ಕಮಗಳೂರು ; ಚಲಿಸುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಬಸ್ ಧಗಧಗನೆ ಹೊತ್ತಿ ಉರಿದ ಘಟನೆ ನಗರದ ಬೇಲೂರು ರಸ್ತೆಯ ಜ್ಯೂನಿಯರ್ ಕಾಲೇಜು ಬಳಿ ಮಂಗಳವಾರ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್‌ನಲ್ಲಿದ್ದ 32 ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಅದೃಷ್ಟವಶಾತ್ ಪಾರಾಗಿದ್ದಾರೆ.

ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/185ETsq2Kx/

ಚಿಕ್ಕಮಗಳೂರು ಡಿಪೋಗೆ ಸೇರಿದ ಈ ಸರ್ಕಾರಿ ಬಸ್ ನಗರದಿಂದ ಹಾಸನದ ಕಡೆಗೆ ಹೊರಟಿತ್ತು. ಬೇಲೂರು ರಸ್ತೆಯ ಜ್ಯೂನಿಯರ್ ಕಾಲೇಜ್ ಸಮೀಪಿಸುತ್ತಿದ್ದಂತೆ ಬಸ್‌ನ ಎಂಜಿನ್ ಭಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತ ಚಾಲಕ ಬಸ್ ಅನ್ನು ರಸ್ತೆ ಬದಿಗೆ ನಿಲ್ಲಿಸಿ, ಪ್ರಯಾಣಿಕರಿಗೆ ಇಳಿಯುವಂತೆ ಸೂಚಿಸಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರಾದರೂ, ಬಸ್‌ನ ಬಹುತೇಕ ಭಾಗ ಬೆಂಕಿಗೆ ಸುಟ್ಟು ಕರಕಲಾಗಿದೆ.

ಸರ್ಕಾರಿ ಬಸ್‌ಗಳ ಸರಿಯಾದ ನಿರ್ವಹಣೆ ಇಲ್ಲದ ಕಾರಣದಿಂದಲೇ ಇಂತಹ ಘಟನೆಗಳು ಪದೇ ಪದೇ ಸಂಭವಿಸುತ್ತಿವೆ ಎಂದು ಸ್ಥಳೀಯರು ಮತ್ತು ಪ್ರಯಾಣಿಕರು ಆರೋಪಿಸಿದ್ದಾರೆ. ಹಳೆಯ ಬಸ್‌ಗಳನ್ನು ರಸ್ತೆಗೆ ಇಳಿಸಿ ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Comment