ರಿಪ್ಪನ್‌ಪೇಟೆ ; ಕೆಂಚನಾಲ ಗ್ರಾಮದ ಮಾರಿಕಾಂಬೆ ದೇವಿಯ ಜಾತ್ರಾ ಮಹೋತ್ಸವ ಅತ್ಯಂತ ಸಡಗರ ಹಾಗೂ ಸಂಭ್ರಮದಿಂದ ಜರುಗಿತು.
ಜಿಲ್ಲೆ ಹಾಗೂ ಹೊರ ಜಿಲ್ಲೆಯಿಂದ ಆಗಮಿಸಿದ ಸಾವಿರಾರು ಭಕ್ತರು ಬೆಳೆಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು.
ಪ್ರತಿ ವರ್ಷ ಮಳೆಗಾಲ ಹಾಗೂ ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಎರಡು ಬಾರಿ ನಡೆಯುವ ಈ ಜಾತ್ರೆ ರಾಜ್ಯದಲ್ಲಿಯೇ ಪ್ರಸಿದ್ಧಿ ಪಡೆದಿದೆ. ಬೆಳೆ ರಕ್ಷಣೆ, ಆರೋಗ್ಯ ಮತ್ತು ಕುಟುಂಬದ ಸಂತಾನ ಅಭಿವೃದ್ಧಿಗಾಗಿ ಭಕ್ತರು ದೇವಿಯ ಸನ್ನಿದಿಯಲ್ಲಿ ಹೊತ್ತ ಹರಕೆ ತೀರಿಸುವುದು ವಾಡಿಕೆಯಾಗಿದೆ. ಸುಮಾರು 15 ರಿಂದ 20 ಸಾವಿರ ಭಕ್ತರು ದೇವಿಯ ದರ್ಶನ ಪಡೆದರು.
ಸಂಸದ ಬಿ.ವೈ. ರಾಘವೇಂದ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ, ಸಾಗರ ವಿಧಾನಸಭಾ ಕ್ಷೇತ್ರ ಶಾಸಕ ಬೇಳೂರು ಗೋಪಾಲಕೃಷ್ಣ, ಮಲೆನಾಡು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥಗೌಡ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಜಿಲ್ಲಾ ಪಂಚಾಯತ್ ಸದಸ್ಯ ಮಂಡಿ ರಾಮಚಂದ್ರ, ಹೊಸನಗರ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ, ಹೊಸನಗರ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ ಕೆಂಚನಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಬೇದುಲ್ಲಾ ಶರೀಫ್, ರಿಪ್ಪನ್‌ಪೇಟೆ ಕಾಂಗ್ರೆಸ್ ಘಟಕದ ಅಧ್ಯಕ್ಷ ಗವಟೂರು ಗಣಪತಿ, ತಹಿಸಿಲ್ದಾರ್ ರಶ್ಮಿ ಹಾಲೇಶ್, ರಿಪ್ಪನ್‌ಪೇಟೆ ಪಿಎಸ್ಐ ಪ್ರವೀಣ್ ಸೇರಿದಂತೆ ಹಲವು ಗಣ್ಯರು ಕೆಂಚನಾಲ ಮಾರಿಕಾಂಬ ಜಾತ್ರೆಗೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.