RIPPONPETE | ವಿದ್ಯುತ್ ಸ್ಪರ್ಶಿಸಿ (Current Shock) ವಿದ್ಯಾರ್ಥಿಯೋರ್ವ (Student) ಮೃತಪಟ್ಟ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ ತಾಲೂಕಿನ ಗವಟೂರು ಗ್ರಾಮದ ಹಳೆಯೂರು ಎಂಬಲ್ಲಿ ನಡೆದಿದೆ.
Hosanagara | ಡೆಂಗ್ಯೂ ಆಮಂತ್ರಿಸುತ್ತಿರುವ ಖಾಲಿ ನಿವೇಶನಗಳ ಗಿಡ-ಗಂಟಿಗಳು, ರೋಗ ನಿಯಂತ್ರಣಕ್ಕೆ ಪ.ಪಂ. ನಿರ್ಲಕ್ಷ್ಯ
ಶಂಕರಪ್ಪ ಎಂಬುವವರ ಪುತ್ರ ಕಾರ್ತಿಕ್ (20) ಮೃತ ದುರ್ಧೈವಿ. ಈತ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಬಿಎ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದನು.
ಶುಕ್ರವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಮನೆ ಅಂಗಳದ ಕೈ ತೋಟದಲ್ಲಿ ಕೆಲಸ ಮಾಡುವಾಗ ಐಬಿಎಕ್ಸ್ ಬೇಲಿಯ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು ಆಕಸ್ಮಿಕವಾಗಿ ತಂತಿ ಸ್ಪರ್ಶಿಸಿದ್ದರಿಂದ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಕರೆ ತಂದು ಪ್ರಥಮ ಚಿಕಿತ್ಸೆ ಕೊಡಿಸಿ, ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಫಲಕಾರಿಯಾಗದೆ ಕಾರ್ತಿಕ್ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಹಾಗೂ ಮೆಸ್ಕಾಂ ಸಿಬ್ಬಂದಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.
SAGARA :ತಹಶೀಲ್ದಾರ್’ರಿಂದ ಮಾನಸಿಕ ಕಿರುಕುಳ ಆರೋಪ, ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ವಿಎ !

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.