RIPPONPETE | ಸೆಮಿಸ್ಟರ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿಯೋರ್ವ (Student) ವಿಷ (Poisson) ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ (Sagara) ತಾಲೂಕಿನ ಆನಂದಪುರ ಸಮೀಪದ ಅಡೂರು ಗ್ರಾಮದಲ್ಲಿ ನಡೆದಿದೆ.
Malenadu Rain | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಬಿದ್ದ ಟಾಪ್ 10 ಸ್ಥಳಗಳಿವು
ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಕಾಲೇಜಿನಲ್ಲಿ ಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಮನುಷ್ ಡಿ (19) ಮೃತ ರ್ದುದೈವಿ. ಈತ ಸೆಮಿಸ್ಟರ್ ಇಂಗ್ಲಿಷ್ ವಿಷಯದಲ್ಲಿ ಫೇಲ್ ಆಗಿದ್ದನು. ಇದರಿಂದ ಮನನೊಂದು ಅಡೂರು ಗ್ರಾಮದ ತನ್ನ ಮನೆಯಲ್ಲಿ ಕಳೆನಾಶಕ ಸೇವಿಸಿದ್ದಾನೆ.

ವಿಷಯ ತಿಳಿದ ಕೂಡಲೇ ಮನುಷ್ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ.
ಈ ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.