Shikaripura

ಆಸ್ಪತ್ರೆ ಆವರಣದ ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಬಾಲಕ ಸಾವು !

SHIKARIPURA ; ಆಸ್ಪತ್ರೆ ಆವರಣದ ನೀರಿನ ತೊಟ್ಟಿಗೆ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿಕಾರಿಪುರ ತಾಲೂಕಿನ ಮತ್ತಿಕೋಟೆ ಗ್ರಾಮದ ಇಮ್ರಾನ್ ಎಂಬುವರ ಪುತ್ರ ಐಯಾನ್ (03) ಮೃತ ಬಾಲಕ. ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇಮ್ರಾನ್ ಅವರ ಸಂಬಂಧಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ವಿಚಾರಿಸಲು ಬಂದಿದ್ದರು. ಆಟವಾಡುತ್ತಾ ಹೊರಗೆ ಬಂದಿದ್ದ ಮಗು ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿದೆ ಎನ್ನಲಾಗಿದೆ.

ತೊಟ್ಟಿಯ ಮುಚ್ಚಳ ಮುಚ್ಚದೆ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಈ ದುರಂತ ಸಂಭವಿಸಿದೆ ಎಂದು ವೈದ್ಯಾಧಿಕಾರಿ ಡಾ. ಶಿವಾನಂದ್ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಸ್ಥಳಕ್ಕೆ ಶಿಕಾರಿಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ‌.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>