ಕೊಪ್ಪ ; ಚಾಲಕನ ನಿಯಂತ್ರಣ ತಪ್ಪಿ ಕಾಫಿ ಮೂಟೆಗಳನ್ನು ತುಂಬಿದ್ದ ಲಾರಿಯೊಂದು ಸುಮಾರು 40 ಅಡಿ ಆಳದ ಕಂದಕಕ್ಕೆ ಉರುಳಿ ಘಟನೆ ಇಂದು ಬೆಳಗ್ಗೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೆಗ್ಗಾರುಕೂಡಿಗೆ ಬಳಿ ನಡೆದಿದೆ.
ಅದೃಷ್ಟವಶಾತ್ ಲಾರಿ ಚಾಲಕ ಮತ್ತು ಕ್ಲೀನರ್ ಇಬ್ಬರೂ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನೆಯಲ್ಲಿ ಕಾಫಿ ಮೂಟೆಗಳು ಚಲ್ಲಾಪಿಲ್ಲಿಯಾಗಿವೆ.

ಮಂಗಳೂರಿಗೆ ಕಾಫಿ ಮೂಟೆಗಳನ್ನು ಸಾಗಿಸುವಾಗ ಘಟನೆ ನಡೆದಿದೆ. ಸ್ಥಳಕ್ಕೆ ಜಯಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

