HOSANAGARA ; ತಾಲ್ಲೂಕಿನ ಕೃಷಿಕ ಸಮಾಜದ ಅಧ್ಯಕ್ಷರಾಗಿ ಎ.ವಿ ಮಲ್ಲಿಕಾರ್ಜುನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹೊಸನಗರದ ಕೃಷಿ ಇಲಾಖೆಯ ಆವರಣದಲ್ಲಿ 2025ರಿಂದ 2029ರವರೆಗೆ ಮುಂದಿನ ಐದು ವರ್ಷಗಳ ಕಾಲ ಕಾರ್ಯಕಾರಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಎಚ್. ಧರ್ಮೇಂದ್ರ ಕೊಳವಂಕ, ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷ್ಮಿನಾರಾಯಣ ಕೆ.ಎಸ್. ಕೊಳಕಿ, ಖಜಾಂಚಿಯಾಗಿ ಟಿ.ಡಿ. ಸೋಮಶೇಖರ್, ಜಿಲ್ಲಾ ಪ್ರತಿನಿಧಿಯಾಗಿ ವಾಟಗೋಡು ಸುರೇಶ್‌ರನ್ನು ಆಯ್ಕೆ ಮಾಡಲಾಯಿತು. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸಚಿನ್ ಹೆಗಡೆ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಕೃಷಿ ಅಧಿಕಾರಿ ಮಾರುತಿ, ಇತರೆ ಕೃಷಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.