ಹೊಸನಗರ

ಹೊಸನಗರ ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷರಾಗಿ ಎ.ವಿ. ಮಲ್ಲಿಕಾರ್ಜುನ್ ಅವಿರೋಧ ಆಯ್ಕೆ

HOSANAGARA ; ತಾಲ್ಲೂಕಿನ ಕೃಷಿಕ ಸಮಾಜದ ಅಧ್ಯಕ್ಷರಾಗಿ ಎ.ವಿ ಮಲ್ಲಿಕಾರ್ಜುನ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಹೊಸನಗರದ ಕೃಷಿ ಇಲಾಖೆಯ ಆವರಣದಲ್ಲಿ 2025ರಿಂದ 2029ರವರೆಗೆ ಮುಂದಿನ ಐದು ವರ್ಷಗಳ ಕಾಲ ಕಾರ್ಯಕಾರಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಎಚ್. ಧರ್ಮೇಂದ್ರ ಕೊಳವಂಕ, ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷ್ಮಿನಾರಾಯಣ ಕೆ.ಎಸ್. ಕೊಳಕಿ, ಖಜಾಂಚಿಯಾಗಿ ಟಿ.ಡಿ. ಸೋಮಶೇಖರ್, ಜಿಲ್ಲಾ ಪ್ರತಿನಿಧಿಯಾಗಿ ವಾಟಗೋಡು ಸುರೇಶ್‌ರನ್ನು ಆಯ್ಕೆ ಮಾಡಲಾಯಿತು. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸಚಿನ್ ಹೆಗಡೆ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಸಂದರ್ಭದಲ್ಲಿ ಕೃಷಿ ಅಧಿಕಾರಿ ಮಾರುತಿ, ಇತರೆ ಕೃಷಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]