ರಿಪ್ಪನ್‌ಪೇಟೆ ; ಇಲ್ಲಿನ ಗವಟೂರು ಗ್ರಾಮದ ನಿವಾಸಿ ಗೀತಾ (33) ಗೃಹಿಣಿ ಅಲ್ಪಕಾಲದ ಅನಾರೋಗ್ಯದಿಂದ ಶನಿವಾರ ಸ್ವಗೃಹದಲ್ಲಿ ನಿಧನರಾದರು.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರಕ್ತ
ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದ ಇವರನ್ನು ವೈದ್ಯರ ಸಲಹೆ ಮೇರೆಗೆ ಮನೆಗೆ ಹಿಂದಿರುಗಿಸಲಾಗಿತ್ತು.
ಮೃತರಿಗೆ ಪತಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಅಂತ್ಯಕ್ರಿಯೆ ಇಂದು ಸ್ವಗ್ರಾಮದಲ್ಲಿ ನೆರವೇರಿತು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.