ರಿಪ್ಪನ್ಪೇಟೆ ; ಉದ್ಯೋಗ ಸಿಕ್ಕಿಲ್ಲವೆಂದು ಯುವಕನೊಬ್ಬ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆದ್ದಾರಿಪುರ ಗ್ರಾ.ಪಂ. ವ್ಯಾಪ್ತಿಯ ಕಾರಗೋಡು ಗ್ರಾಮದಲ್ಲಿ ನಡೆದಿದೆ.
ಸೃಜನ್ (19) ಆತ್ಮಹತ್ಯೆಗೆ ಶರಣಾದ ಯುವಕ ಎಂದು ತಿಳಿದುಬಂದಿದೆ. ಐಐಟಿ ವ್ಯಾಸಂಗ ಮಾಡಿದ್ದ ಸೃಜನ್ ಗೆ ಸರಿಯಾದ ಉದ್ಯೋಗ ದೊರಕಿರಲಿಲ್ಲ. ಹಾಗಾಗಿ ಆತ ಗಾರೆಕೆಲಸ ಮಾಡುತ್ತಿದ್ದ. ಈ ಹಿನ್ನಲೆ ಓದಿಗೆ ತಕ್ಕ ಉದ್ಯೋಗ ಸಿಗಲಿಲ್ಲ ಎಂಬ ಕಾರಣದಿಂದ ಮನೆಯವರೆಲ್ಲಾ ಸಂಬಂಧಿಕರ ಮದುವೆಗೆಂದು ಹೋಗಿದ್ದ ಸಂದರ್ಭದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಸಂಬಂಧ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.