ಅಪರಾಧ ಸುದ್ದಿ

ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ !

ಶಿವಮೊಗ್ಗ : ಮನೆಯಲ್ಲಿ ಮಲಗಿದ್ದ ಯುವಕನನ್ನು ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲ್ಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಪ್ರವೀಣ್ (29) ಕೊಲೆಯಾದ ಯುವಕ. ಪ್ರವೀಣ್ ಟ್ರ್ಯಾಕ್ಟರ್ ಬಾಡಿಗೆ ಮತ್ತು ಇತರ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ. ಬೆಳಿಗ್ಗೆ ಕೆಲಸಕ್ಕೆ ಬರುವಂತೆ ತಿಳಿಸಿದ್ದರೂ, ಅವರು ಫೋನ್ ಕರೆಗಳಿಗೆ ಪ್ರತಿಕ್ರಿಯಿಸಿರಲಿಲ್ಲ. ಅನೇಕ ಬಾರಿ ಕರೆ ಮಾಡಿದರೂ ಸಂಪರ್ಕವಾಗದಿರುವುದರಿಂದ ಕೆಲವು ಯುವಕರು ಅನುಮಾನಗೊಂಡು ಸ್ಥಳಕ್ಕೆ ಹೋದಾಗ ಪ್ರವೀಣ್ ಅವರ ಮೃತದೇಹ ಕಂಡುಬಂದಿದೆ.

ಮೃತದೇಹವು ಮಚ್ಚಿನಿಂದ ಭೀಕರವಾಗಿ ಕೊಚ್ಚಿ ಹತ್ಯೆಯಾದ ಸ್ಥಿತಿಯಲ್ಲಿ ಇದ್ದು, ಹಳೆಯ ವೈಷಮ್ಯದಿಂದಾಗಿ ಈ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ರವಾನಿಸಲಾಗಿದೆ. ಈ ಪ್ರಕರಣದ ಸಂಬಂಧ ಶಿವಮೊಗ್ಗದ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!