Chikkamagaluru

ಜಲಪಾತದಲ್ಲಿ ಈಜಲು ಹೋಗಿದ್ದ ಯುವಕನ ತಲೆಗೆ ಬಂಡೆ ತಗುಲಿ ಸಾವು !

ಚಿಕ್ಕಮಗಳೂರು ; ಕಾಮೇನಹಳ್ಳಿ ಜಲಪಾತದಲ್ಲಿ ಈಜಲು ಹೋಗಿದ್ದ ಯುವಕನೋರ್ವನ ತಲೆ ಬಂಡೆಗೆ ತಗುಲಿ ಮೃತಪಟ್ಟ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಚೇತನ್ (18) ಮೃತ ಯುವಕ ಎಂದು ಗುರುತಿಸಲಾಗಿದೆ. ಕಾಮೇನಹಳ್ಳಿ ಜಲಪಾತವು ಚಿಕ್ಕಮಗಳೂರಿನಿಂದ ಸುಮಾರು 30 ಕಿ.ಮೀ ದೂರದಲ್ಲಿದ್ದು, ಮಲ್ಲೇನಹಳ್ಳಿ ಮಾರ್ಗವಾಗಿ ಪ್ರವೇಶಿಸಬಹುದು.

ಈ ಜಲಪಾತವು ಸುಮಾರು 70-90 ಅಡಿ ಎತ್ತರದಿಂದ ಧುಮ್ಮಿಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತದೆ. ಆದರೆ, ಸುರಕ್ಷತಾ ಕ್ರಮಗಳನ್ನು ಪಾಲಿಸದೆ ಈಜಲು ಹೋಗುವುದು ಅಪಾಯಕಾರಿಯಾಗಿದೆ. ಈ ಹಿಂದೆ, 2024ರ ನವೆಂಬರ್‌ನಲ್ಲಿ, ಬೆಂಗಳೂರಿನ ಟೆಕ್ಕಿ ಅಮಿತ್ ಕುಮಾರ್ ಹೆಬ್ಬೆ ಜಲಪಾತದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಕಾಮೇನಹಳ್ಳಿ ಜಲಪಾತವು ಪ್ರವಾಸಿಗರ ಹಾಟ್‍ಸ್ಪಾಟ್ ಆಗಿದ್ದು, ಸರಿಯಾದ ದಾರಿ ಇಲ್ಲದಿದ್ದರೂ, ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಚಿಕ್ಕಮಗಳೂರಿನಿಂದ ಮಲ್ಲೇನಹಳ್ಳಿ ಮಾರ್ಗವಾಗಿ 30 ಕಿ.ಮೀ. ಸಾಗಿ, ಕಾಮೇನಹಳ್ಳಿಗೆ ಎಂಟ್ರಿಯಾದರೆ, ಸುಮಾರು ಒಂದೂವರೆ ಕಿ.ಮೀ. ನಡೆದು ಜಲಪಾತವನ್ನು ತಲುಪಬಹುದು.

ಜಲಪಾತಗಳಲ್ಲಿ ಈಜಲು ಹೋಗುವಾಗ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತ್ಯಂತ ಮುಖ್ಯವಾಗಿದೆ. ಅಧಿಕಾರಿಗಳು ನೀಡಿರುವ ಎಚ್ಚರಿಕೆಗಳನ್ನು ಗಮನಿಸಿ, ಅಪಾಯಗಳನ್ನು ತಪ್ಪಿಸಲು ಪ್ರಯತ್ನಿಸಬೇಕು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]