ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ; ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನಾಪತ್ತೆ !

ತೀರ್ಥಹಳ್ಳಿ ; ತಾಲೂಕಿನ ಹೊನ್ನೆತಾಳು ಗ್ರಾಮದ ಸುರೇಶ್ ಎಂಬುವವರ 19 ವರ್ಷದ ಮಗಳು ಪ್ರಿಯಾಂಕ ಅಲಿಯಾಸ್ ಪಾರ್ವತಿ ಎಂಬ ಯುವತಿ ಬ್ರಹ್ಮಾವರದ ಸತ್ಯನಾಥ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಏ.21 ರಂದು ಬ್ರಹ್ಮಾವರಕ್ಕೆ ಹೋಗುವುದಾಗಿ ಹೇಳಿ ಬೆಳಿಗ್ಗೆ 9 ಗಂಟೆಗೆ ಮನೆಯಿಂದ ಹೋಗಿದ್ದು ಈವರೆಗೂ ಮನೆಗೆ ವಾಪಸ್ಸು ಬಂದಿರುವುದಿಲ್ಲ.

WhatsApp Group Join Now
Telegram Group Join Now
Instagram Group Join Now

ಈಕೆಯ ಚಹರೆ ತೆಳುವಾದ ಮೈಕಟ್ಟು, 4 ಅಡಿ 5 ಇಂಚು ಎತ್ತರ, ಕೋಲುಮುಖ, ತಲೆಯಲ್ಲಿ ಸುಮಾರು 14 ಇಂಚು ಉದ್ದದ ಕಪ್ಪು ಕೂದಲಿದ್ದು, ಎಡಕೈ ಮುಂಗೈ ಮೇಲೆ ಇಂಗ್ಲೀಷ್ ಅಕ್ಷರದಲ್ಲಿ MOM DAD ಮತ್ತು Priya ಎಂದು ಹಚ್ಚೆ ಹಾಕಿಸಿಕೊಂಡಿರುತ್ತಾಳೆ. ಕನ್ನಡ ಮಾತನಾಡಲು, ಓದಲು ಬರೆಯಲು ಬಲ್ಲವಳಾಗಿದ್ದು, ಮನೆಯಿಂದ ಹೋಗುವಾಗ ಗುಲಾಬಿ ಬಣ್ಣದ ಚೂಡಿದಾರ ಧರಿಸಿರುತ್ತಾಳೆ.

ಈ ಯುವತಿ ಪತ್ತೆಯಾದಲ್ಲಿ ಶಿವಮೊಗ್ಗ ಜಿಲ್ಲೆ :- 08182-261400, ತೀರ್ಥಹಳ್ಳಿ :- 08181 – 220388, ಮಾಳೂರು :- 9480803333, ಆಗುಂಬೆ :- 9480803314 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]