RIPPONPETE ; ಮಕ್ಕಳ ಭವಿಷ್ಯದಲ್ಲಿ ನಮ್ಮ ಭವಿಷ್ಯವಿದೆ ಎಂಬುದನ್ನು ಕಂಡುಕೊಂಡ ತಂದೆ-ತಾಯಿಗಳು ತಮ್ಮ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಲು ನಿರಂತರ ಶ್ರಮ ಪಡುತ್ತಾರೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಕೋಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ನಮ್ಮಶಾಲೆ-ನಮ್ಮ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸನಾತನ ಪದ್ದತಿಯಲ್ಲಿ ಶಿಕ್ಷಣ ಕಲಿತವರಿಗೆ ದೈವತ್ವ ಗೌರವವನ್ನು ನೀಡಬೇಕೆಂದಿದೆ. ಆದರೆ ನಾವುಗಳು ಇಂದು ಅಂತಹ ಸಂಸ್ಕಾರಯುತ ಶಿಕ್ಷಣ ನೀಡುತ್ತಿದ್ದೇವೆಯೇ…? ಎಂದು ಆತ್ಮವಿಮರ್ಶೆ ಮಾಡಿಕೊಳ್ಳಬೇಕು. ಚಿಕ್ಕವಯಸ್ಸಿನಲ್ಲಿ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡಿದರೆ ಸುಸಂಸ್ಕೃತರಾಗುವ ಮೂಲಕ ಸಮಾಜದ ಆಸ್ತಿಯಾಗಿ ಹೊರಹೊಮ್ಮುತ್ತಾರೆಂದರು.
ಎಸ್.ಡಿ.ಎಂ.ಸಿ ಅಧ್ಯಕ್ಷ ಕೃಷ್ಣಚಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೋಡೂರು ಗ್ರಾಮ ಪಂಚಾಯ್ತಿ ನಿಕಟಪೂರ್ವ ಅಧ್ಯಕ್ಷ ಕೆ.ಎಸ್.ಉಮೇಶ್, ಉಪಾಧ್ಯಕ್ಷ ಎಂ.ಸುಧಾಕರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಗ್ರಾಮ ಪಂಚಾಯ್ತಿ ಸದಸ್ಯರಾದ ಜಯಪ್ರಕಾಶಶೆಟ್ಟಿ, ಯೋಗೇಂದ್ರಪ್ಪ, ಸವಿತಾ, ಸುನಂದ, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ, ತಾ.ಪಂ.ಮಾಜಿ ಸದಸ್ಯ ಬಿ.ಜಿ.ಚಂದ್ರಮೌಳಿ ಮತ್ತಿತರಿದ್ದರು.