SAGARA ; ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತನನ್ನು ಸಾಗರದ ಗಾಂಧಿನಗರದ ಸಮೀರ್ (22) ಎಂದು ಗುರುತಿಸಲಾಗಿದೆ. ಮೃತ ಸಮೀರ್ ಅಣಲೇಕೊಪ್ಪದಲ್ಲಿರುವ ತನ್ನ ಅಕ್ಕನ ಮನೆಗೆ ಹೊರಟಿದ್ದಾಗ, ಸಾಗರ ಗ್ರಾಮಾಂತರ ಠಾಣೆ ಸಮೀಪ ಬೆಳಗಾವಿ ಮೂಲದ ಕಾರೊಂದು ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಸಮೀರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಸಮೀರ್ ಚಿಕ್ಕವನಿದ್ದಾಗಲೇ ತಂದೆ-ತಾಯಿ ಮೃತಪಟ್ಟಿದ್ದರು. ಈತ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಎಂದು ತಿಳಿದುಬಂದಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.