ತೀರ್ಥಹಳ್ಳಿ ; ಬೈಕ್ ಹಾಗೂ ಡೀಸೆಲ್ ಸಾಗಾಟದ ಟ್ಯಾಂಕರ್ ಮಧ್ಯೆ ಸಂಭವಿಸಿದ ವಾಹನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಸಂತೆ ಮಾರ್ಕೆಟ್ ಬಳಿ ಸಂಭವಿಸಿದೆ.

ಹನುಮಂತಪ್ಪ (59) ಮೃತ ಬೈಕ್ ಸವಾರ. ಇವರು ಅರಣ್ಯ ಇಲಾಖೆಯಲ್ಲಿ ಕ್ಷೇಮಾಭಿವೃದ್ಧಿ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಶುಕ್ರವಾರ ಸಂಜೆ ಬೆಜ್ಜವಳ್ಳಿ ಸಮೀಪ ಬೈಕಿನಲ್ಲಿ ರಸ್ತೆಯನ್ನು ದಾಟುತ್ತಿದ್ದಾಗ ಏಕಾಏಕಿ ಎದುರಿನಿಂದ ಬಂದ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದಿದೆ ಪರಿಣಾಮ ಹನಮಂತಪ್ಪ ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ.
ಸ್ಥಳಕ್ಕೆ ಮಾಳೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

