ತೀರ್ಥಹಳ್ಳಿ ; ಬೈಕ್ ಹಾಗೂ ರಾಜಹಂಸ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಂಜದಕಟ್ಟೆ ಸಮೀಪದ ಶಿವರಾಜಪುರ ಬಳಿ ಬುಧವಾರ ರಾತ್ರಿ ನಡೆದಿದೆ.

ಪುನೀತ್ (26) ಮೃತ ಯುವಕ. ರಂಜದಕಟ್ಟೆ ಸಮೀಪದ ಮೀನುಗುಂದ ಗ್ರಾಮದ ಈತ ತೀರ್ಥಹಳ್ಳಿಯ ಕುರುವಳ್ಳಿಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ.
ಕಳೆದ ರಾತ್ರಿ ತೀರ್ಥಹಳ್ಳಿಯ ವಿನಾಯಕ ಚಿತ್ರಮಂದಿರದಲ್ಲಿ ಡೆವಿಲ್ ಸಿನಿಮಾದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಪುನೀತ್ ತಮ್ಮ ಬೈಕಿನಲ್ಲಿ ಮನೆಗೆ ಮರಳುತ್ತಿದ್ದ ವೇಳೆ ರಾಜಹಂಸ ಬಸ್ ಡಿಕ್ಕಿಯಾಗಿ ತಲೆಗೆ ಗಂಭೀರ ಗಾಯಗೊಂಡಿದ್ದ ಆಸ್ಪತ್ರೆಗೆ ರವಾನೆ ಮಾಡುವ ಮೊದಲೇ ಮೃತಪಟ್ಟಿದ್ದಾನೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

