Accident

ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ ; ಓರ್ವ ಸ್ಥಳದಲ್ಲೇ ಸಾವು !

ತೀರ್ಥಹಳ್ಳಿ ; ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಮತ್ತೊರ್ವ ಗಂಭೀರ ಗಾಯಗೊಂಡಿರುವ ಘಟನೆ ಸಕ್ರೆಬೈಲು ಬಳಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆ ಬರುತ್ತಿದ್ದ ಆಲ್ಟೊ ಕಾರು ನಡುವೆ ಅಪಘಾತ ಸಂಭವಿಸಿದೆ.

ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮತ್ತೊರ್ವನ ಸ್ಥಿತಿ ಗಂಭೀರವಾಗಿದ್ದು ಆತನನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಬಸ್‌ನ ಹಾಗೂ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಕಾರು ಬಲ ಭಾಗಕ್ಕೆ ಹೋಗಿ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!