Accident

ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ; ಯುವಕ ಸ್ಥಳದಲ್ಲೇ ಸಾವು !

ಸಾಗರ ; ತಾಲೂಕಿನ ಸಿರಿವಂತೆ-ಗಾಳಿಪುರ ಮಾರ್ಗ ಮಧ್ಯೆ ಇಂದು ಮಧ್ಯಾಹ್ನ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಮೃತನನ್ನು ಹುಣಸೂರು ಮೂಲದ ಅಶೋಕ್ (25) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಸುಮಾರು 12 ಗಂಟೆ ಸಮಯದಲ್ಲಿ ಸಿರಿವಂತೆ ಮತ್ತು ಗಾಳಿಪುರ ರಸ್ತೆಯ ಮಧ್ಯೆ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಅಶೋಕ್ ಅವರ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಅತಿಯಾದ ರಕ್ತಸ್ರಾವದಿಂದಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!