ಹೊಸನಗರ

KSRTC ಬಸ್ ಮತ್ತು ಲಾರಿ ನಡುವೆ ಅಪಘಾತ ; ಸಂಚಾರ ಅಸ್ತವ್ಯಸ್ತ

ಹೊಸನಗರ : ಸರ್ಕಾರಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಹೊರವಲಯದ ಸಾಗರ ರಸ್ತೆಯ ಅಂಕ್ರೋಡಿ ತಿರುವಿನಲ್ಲಿ ಮಧ್ಯಾಹ್ನ 2:00 ಗಂಟೆ ಸುಮಾರಿಗೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಸಾಗರದಿಂದ ಹೊಸನಗರಕ್ಕೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗು ಜಯನಗರದಿಂದ ಆನಂದಪುರಕ್ಕೆ ತೆರಳುತ್ತಿದ್ದ ಲಾರಿ ನಡುವೆ ಈ ಅಪಘಾತ ಸಂಭವಿಸಿದ್ದು ಸಾಗರ – ಹೊಸನಗರ ಮಧ್ಯೆ ಕೆಲಕಾಲ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.

ವಿಷಯ ತಿಳಿದ ಹೊಸನಗರ ಪೊಲೀಸರು ಅಪಘಾತ ನಡೆದ ಸ್ಥಳಕ್ಕೆ ತೆರಳಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಅದೃಷ್ಟವಶಾತ್ ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಹೊಸನಗರ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]