ರಿಪ್ಪನ್‌ಪೇಟೆ ; ಇಲ್ಲಿನ ತೀರ್ಥಹಳ್ಳಿ – ರಿಪ್ಪನ್‌ಪೇಟೆ ಮಾರ್ಗದ ಹೆದ್ದಾರಿಪುರ – ಜಂಬಳ್ಳಿ ಸಂಪರ್ಕದ ರಸ್ತೆಯಲ್ಲಿ ಬೈಕ್‌ಗೆ ಬುಲೆರೋ ಪಿಕ್ಅಪ್ ವಾಹನ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಮೃತ ಬೈಕ್ ಸವಾರ ಶಿವಪುರ ನಿವಾಸಿ ಮಂಜುನಾಥ (39) ಎಂದು ಗುರುತಿಸಲಾಗಿದೆ. ರಾತ್ರಿ ಕಬಾಬ್ ಅಂಗಡಿ ವ್ಯಾಪಾರ ಮಾಡಿಕೊಂಡು ರಿಪ್ಪನ್‌ಪೇಟೆಯಿಂದ ಮನೆಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.