ಹೊಸನಗರ ; ಖಾಸಗಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ನಿಟ್ಟೂರು ಗುರುಟೆ ಬಳಿ ಇಂದು ಬೆಳಿಗ್ಗೆ ನಡೆದಿದೆ.

ಸಾಗರದಿಂದ ನಿಟ್ಟೂರು ಮಾರ್ಗವಾಗಿ ಕುಂದಾಪುರ ಕಡೆ ಹೋಗುತ್ತಿದ್ದ ಖಾಸಗಿ ಬಸ್ ಮತ್ತು ಎದುರುಗಡೆಯಿಂದ ಬರುತ್ತಿದ್ದ ಲಾರಿ ನಡುವೆ ಅಪಘಾತ ನಡೆದಿದೆ.

ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿ ಇಬ್ಬರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ. ಹಲವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

