Accident

SHIVAMOGGA ಎರಡು ಕಾರುಗಳ ನಡುವೆ ಭೀಕರ ಅಪಘಾತ, ಮೂವರು ಸ್ಥಳದಲ್ಲೇ ಸಾವು!

SHIVAMOGGA | ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಸಾಗರ ರಸ್ತೆಯ ಮುದ್ದಿನಕೊಪ್ಪ ಟ್ರೀ ಪಾರ್ಕ್ ಬಳಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಇನೋವಾ ಹಾಗೂ ಸ್ವೀಪ್ಟ್ ಕಾರು ನಡುವೆ ಅಪಘಾತ ಈ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರಿಗೆ ಗಂಭೀರ ಗಾಯಗಳಾಗಿವೆ‌.

ಹೊಸನಗರದಲ್ಲಿ ಕೆಡಿಪಿ ಸಭೆ | ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು ಆರೋಗ್ಯ ಇಲಾಖೆಯವರು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಿ ; ಶಾಸಕ ಬೇಳೂರು

ಕಿಮ್ಮನೆ ರೆಸಾರ್ಟ್ ನಿಂದ ವಿದೇಶಿ ಪ್ರವಾಸಿಗರನ್ನ ಕರೆದುಕೊಂಡು ಜೋಗ ನೋಡಲು ಇನೋವಾ ಕಾರಿನಲ್ಲಿ ಹೊರಟಿದ್ದರು.‌ ಸ್ವಿಫ್ಟ್ ಕಾರೊಂದು ಓವರ್ ಟೇಕ್ ಮಾಡಿಕೊಂಡು ಬಂದ ವೇಳೆ ಇನೋವಾ ಕಾರಿಗೆ ಡಿಕ್ಕಿ ಹೊಡೆದಿದೆ.

ಇನೋವಾ ಚಾಲಕ ಗಿರೀಶ್ ಗಾಯಗೊಂಡಿದ್ದಾರೆ. ಸ್ವಿಫ್ಟ್ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದು ಮೃತನನ್ನು ಚಳ್ಳಕೆರೆಯ ಬೆಳಲಗೆರೆ ಇಮಾಮ್ ಸಾಬ್ ಎಂದು ಗುರುತಿಸಲಾಗಿದೆ. ಇನ್ನಿಬ್ಬರ ಗುರುತು ಪತ್ತೆಯಾಗಬೇಕಿದೆ. ಓರ್ವ ಮಹಿಳೆ ಸೇರಿದಂತೆ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ‌‌. ಇನೋವಾ ಕಾರಿನಲ್ಲಿದ್ದರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಕುಂಸಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

Malenadu Rain | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟು ಮಳೆಯಾಗಿದೆ ಗೊತ್ತಾ ?

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]