SHIVAMOGGA | ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಸಾಗರ ರಸ್ತೆಯ ಮುದ್ದಿನಕೊಪ್ಪ ಟ್ರೀ ಪಾರ್ಕ್ ಬಳಿ ನಡೆದಿದೆ.
ಇನೋವಾ ಹಾಗೂ ಸ್ವೀಪ್ಟ್ ಕಾರು ನಡುವೆ ಅಪಘಾತ ಈ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಕಿಮ್ಮನೆ ರೆಸಾರ್ಟ್ ನಿಂದ ವಿದೇಶಿ ಪ್ರವಾಸಿಗರನ್ನ ಕರೆದುಕೊಂಡು ಜೋಗ ನೋಡಲು ಇನೋವಾ ಕಾರಿನಲ್ಲಿ ಹೊರಟಿದ್ದರು. ಸ್ವಿಫ್ಟ್ ಕಾರೊಂದು ಓವರ್ ಟೇಕ್ ಮಾಡಿಕೊಂಡು ಬಂದ ವೇಳೆ ಇನೋವಾ ಕಾರಿಗೆ ಡಿಕ್ಕಿ ಹೊಡೆದಿದೆ.

ಇನೋವಾ ಚಾಲಕ ಗಿರೀಶ್ ಗಾಯಗೊಂಡಿದ್ದಾರೆ. ಸ್ವಿಫ್ಟ್ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದು ಮೃತನನ್ನು ಚಳ್ಳಕೆರೆಯ ಬೆಳಲಗೆರೆ ಇಮಾಮ್ ಸಾಬ್ ಎಂದು ಗುರುತಿಸಲಾಗಿದೆ. ಇನ್ನಿಬ್ಬರ ಗುರುತು ಪತ್ತೆಯಾಗಬೇಕಿದೆ. ಓರ್ವ ಮಹಿಳೆ ಸೇರಿದಂತೆ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಇನೋವಾ ಕಾರಿನಲ್ಲಿದ್ದರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಕುಂಸಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.