ತೀರ್ಥಹಳ್ಳಿ ; ಬೈಕ್ ಮತ್ತು ಬುಲೆರೋ ವಾಹನದ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾ*ವನ್ನಪ್ಪಿದ ಘಟನೆ ಪಟ್ಟಣದ ಬಾಳೆಬೈಲು ಸಮೀಪದಲ್ಲಿ ಇಂದು ಸಂಜೆ ನಡೆದಿದೆ.

ಹುಂಚದಕಟ್ಟೆ ಸಮೀಪದ ನಿಟ್ಟೂರು ನಿವಾಸಿ ಚರಣ್ (23) ಮೃತ ದುರ್ದೈವಿ. ಈತ ತೀರ್ಥಹಳ್ಳಿಯಿಂದ ಮನೆಗೆ ವಾಪಸ್ಸಾಗುವಾಗ ಈ ಘಟನೆ ಸಂಭವಿಸಿದೆ.

ಚರಣ್ ಮೃತದೇಹ ಪಟ್ಟಣದ ಜೆ.ಸಿ ಆಸ್ಪತ್ರೆಯ ಶರಗಾರದಲ್ಲಿದ್ದು ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.