Accident

Accident | ಕಾರಿಗೆ ಡಿಕ್ಕಿಯಾಗಿ 15 ಅಡಿ ಆಳಕ್ಕೆ ಉರುಳಿದ ಲಾರಿ !

HOSANAGARA | ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಎರಡು ವಾಹನ ನಜ್ಜುಗುಜ್ಜಾಗಿ ಲಾರಿ 15 ಅಡಿ ಆಳಕ್ಕೆ ಮಗುಚಿ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಯಡೂರಿನಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಲಾರಿ ಮತ್ತು ಮಾಸ್ತಿಕಟ್ಟೆ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಯಡೂರು ಮುಖ್ಯರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.

School Holidays |  ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಗುರುವಾರವೂ ರಜೆ

ಕಾರಿನಲ್ಲಿ‌ ನಾಲ್ಕು ಜನರಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಲಾರಿ 15 ಅಡಿ ಕೆಳಗೆ ಬಿದ್ದ ಕಾರಣ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದೆ. ಗಾಯಳುಗಳಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಕಾರಿನಲ್ಲಿ ಪ್ರಯಾಣಿಸುತಿದ್ದವರು ಶಿವಮೊಗ್ಗ ಮೂಲದವರೆಂದು ತಿಳಿದು ಬಂದಿದ್ದು, ನಾಲ್ವರು ಪ್ರವಾಸಕ್ಕೆಂದು ಬಂದು ಯಡೂರಿನ ಆಮಂತ್ರಣ ರೆಸಾರ್ಟ್’ನಲ್ಲಿ ಉಳಿದುಕೊಂಡಿದ್ದರು. ಬುಧವಾರ ಹುಲಿಕಲ್ ಫಾಲ್ಸ್ ನೋಡಿ ವಾಪಾಸಾಗುವ ವೇಳೆಗೆ ಈ ದುರ್ಘಟನೆ ನಡೆದಿದೆ.

ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]