Accident

Accident | ಅಂಬ್ಯುಲೆನ್ಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ, ಮೂವರು ಸ್ಥಳದಲ್ಲೇ ಸಾವು !

SHIKARIPURA | ಅಂಬ್ಯುಲೆನ್ಸ್ (Ambulance) ಹಾಗೂ ಬೈಕ್ (Bike) ನಡುವೆ ಭೀಕರ ಅಪಘಾತ (Accident) ಸಂಭವಿಸಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ (Tharalaghatta) ಬಳಿ‌ ತಡರಾತ್ರಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

Read more: ಭಾಗ್ಯಲಕ್ಷ್ಮಿ ಬಾಂಡ್ ಇದ್ದವರ ಖಾತೆಗಳಿಗೆ ಸರ್ಕಾರದಿಂದ ಬಿಡುಗಡೆಯಾಗಲಿದೆ 1 ಲಕ್ಷ ಹಣ !

ಪ್ರಸನ್ನ (25), ಕಾರ್ತಿಕ್ (27) ಮತ್ತು ಅಜಯ್ (25) ಮೃತ ದುರ್ದೈವಿಗಳಾಗಿದ್ದು, ಶಿವಮೊಗ್ಗದಿಂದ ಹಾವೇರಿ ಕಡೆ ತೆರಳುತ್ತಿದ್ದ ಅಂಬ್ಯುಲೆನ್ಸ್’ಗೆ ಶಿಕಾರಿಪುರದ ಕಡೆಯಿಂದ ಹೊಸ ಜೋಗದ ಕಡೆ ಬರುತ್ತಿದ್ದ ಬೈಕ್ ಡಿಕ್ಕಿಯಾಗಿದೆ.

ಮೃತಪಟ್ಟವರನ್ನ ಹೊಸ ಜೋಗದ ನಿವಾಸಿಗಳು ಎನ್ನಲಾಗುತ್ತಿದೆ. ಸ್ಥಳಕ್ಕೆ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Read more: SHIVAMOGGA | DCC ಬ್ಯಾಂಕ್ ಚುನಾವಣೆ, ಗೆದ್ದು ಬೀಗಿದ ಕಾಂಗ್ರೆಸ್ ಅಭ್ಯರ್ಥಿಗಳು !

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>