HOSANAGARA | ಮೀನು ಹಿಡಿಯಲು ಹೋಗಿ ವಾಪಾಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು (Car) ಪಲ್ಟಿಯಾದ ಘಟನೆ ಮಾಸ್ತಿಕಟ್ಟೆ (Mastikatte) ಸಮೀಪದ ಶಂಕರಮನೆ ಎಂಬಲ್ಲಿ ಬುಧವಾರ ಸಂಭವಿಸಿದೆ.
Read More :ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರೆದ ಭಾರಿ ವರ್ಷಧಾರೆ, ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?
ಯಡೂರು ಸಮೀಪ ಮತ್ತಿಗ ಬಳಿ ಮೀನು ಹಿಡಿಯಲು ಹೋಗಿ ತೀರ್ಥಹಳ್ಳಿಗೆ ವಾಪಾಸ್ ಆಗುವಾಗ ಈ ಘಟನೆ ನಡೆದಿದೆ.
ಪಟ್ಟಣದ ಸಮೀಪದ ಕೌರಿಬೈಲು, ಹೆಗ್ಗೆಬೈಲು ಹಾಗೂ ಸಿಬಿನಕೆರೆಯ ಐವರು ಯುವಕರು ಮೀನು ಹಿಡಿಯಲು ಕಾರಿನಲ್ಲಿ ಹೋಗಿದ್ದರು. ವಾಪಾಸ್ ಬರುವಾಗ ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು ಗಾಯಗೊಂಡ ಮೂವರನ್ನು ಪಟ್ಟಣದ ಸರ್ಕಾರಿ ಜೆಸಿ ಆಸ್ಪತ್ರೆಗೆ ಹಾಗೂ ಇಬ್ಬರನ್ನು ಉಡುಪಿಯ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.
ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅದರಲ್ಲಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read more:School Holiday | ಭಾರಿ ಮಳೆ ಹಿನ್ನೆಲೆಯಲ್ಲಿ ಈ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.