ಭೀಕರ ಅಪಘಾತ, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು !

Written by Mahesha Hindlemane

Updated on:

SAGARA ; ಬೈಕ್ ಹಾಗೂ ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಗೌತಮಪುರ ಬಳಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಮೃತರನ್ನು ಬೆಳಂದೂರು ಗ್ರಾಮದ ವಾಸಪ್ಪ (60) ಹಾಗೂ ಅವರ ಅಳಿಯ ಸತೀಶ್ (40) ಎಂದು ಗುರುತಿಸಲಾಗಿದೆ.

ಬೆಳಂದೂರು ಗ್ರಾಮದಿಂದ ಆನಂದಪುರದ ಕಡೆ ತೆರಳುತ್ತಿದ್ದ ಟಿವಿಎಸ್ ಎಕ್ಎಲ್ ಬೈಕ್ ಮತ್ತು ಆನಂದಪುರದಿಂದ ತ್ಯಾಗರ್ತಿ ಕಡೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ದೋಸ್ತ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ಘಟನೆ ನಡೆದಿದೆ.

ಆನಂದಪುರ 112 ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment