ಸ್ಕೂಟಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ; ಇಬ್ಬರು ಯುವಕರು ಸಾವು ! Accident | Car | Bike | Chikkamagaluru

0 220

ತರೀಕೆರೆ : ಕಾರು ಮತ್ತು ಸ್ಕೂಟಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ತಾಲೂಕಿನ ಬೆಟ್ಟದಹಳ್ಳಿ ಗ್ರಾಮದ ಸಂದೀಪಿನಿ ಶಾಲೆಯ ಬಳಿ ನಡೆದಿದೆ.

ಡಿಕ್ಕಿಯ ತೀವ್ರತೆಗೆ ಸ್ಕೂಟಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಮೃತರನ್ನು ತರೀಕೆರೆ ಪಟ್ಟಣದ ಬಿಲಾಲ್ (26) ಮತ್ತು ಅಜೀಮ್ (24) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಇಬ್ಬರು ಯುವಕರು ಬುಧವಾರ ಬೆಳಗ್ಗೆ ಪಟ್ಟಣದಿಂದ ಸಂದೀಪಿನಿ ಶಾಲೆಯತ್ತ ಸ್ಕೂಟಿಯಲ್ಲಿ ಹೋಗುತ್ತಿದ್ದ ವೇಳೆ ಎದುರಿನಿಂದ ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದ ಸ್ಥಳಕ್ಕೆ ತರೀಕರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave A Reply

Your email address will not be published.

error: Content is protected !!