ಅಪರಾಧ ಸುದ್ದಿ

ತೀರ್ಥಹಳ್ಳಿ : ಅಕ್ರಮವಾಗಿ ನಾಡ ಬಂದೂಕು ತಯಾರಿಸುತ್ತಿದ್ದವನ ಬಂಧನ !

ತೀರ್ಥಹಳ್ಳಿ : ತಾಲೂಕಿನ ಅಕ್ಲಾಪುರ ಗ್ರಾಮದಲ್ಲಿ ಅಕ್ರಮವಾಗಿ ನಾಡ ಬಂದೂಕು ತಯಾರಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಸುಧಾಕರ ಆಚಾರಿ (39) ಬಂಧಿತ ಆರೋಪಿ ಎಂದು ಇಲಾಖೆ ಜೂನ್ 21 ರಂದು ಬಿಡುಗಡೆ ಮಾಡಿದ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಅಕ್ಲಾಪುರ ಗ್ರಾಮದಲ್ಲಿ ನಾಡ ಬಂದೂಕು ತಯಾರಿಕೆಯ ಬಗ್ಗೆ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿ, ಆರೋಪಿಯಿಂದ ನಾಡ ಬಂದೂಕನ್ನು ವಶಪಡಿಸಿಕೊಂಡಿರುವ ಬಗ್ಗೆ ಮಾಹಿತಿ ನೀಡಲಾಗಿದೆ.

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಆಯುಧ ಕಾಯ್ದೆಯ 3, 5 ಮತ್ತು 25ನೇ ಕಲಂಗಳ ಅಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಡಿವೈಎಸ್ಪಿ ಅರವಿಂದ ಕಲಗುಜ್ಜಿಯ ಮಾರ್ಗದರ್ಶನದಲ್ಲಿ ಸಬ್ ಇನ್ಸ್‌ಪೆಕ್ಟರ್ ಆರ್ ಸುಷ್ಮಾ ಹಾಗೂ ಸಿಬ್ಬಂದಿಗಳಾದ ಲಿಂಗೇಗೌಡ, ಪ್ರವೀಣ ಕುಮಾರ್, ಪರಮೇಶ್ ನಾಯ್ಕ್, ದೀಪಕ್, ದೀಪಕ್ ಕೆ ಪಿ, ಪ್ರಮೋದ್ ಜಿ, ರಾಘವೇಂದ್ರ ಮತ್ತು ಮೋಹನ್ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!