ಅಪರಾಧ ಸುದ್ದಿ

ಹೊಸನಗರ : ಬೈಕ್ ಮತ್ತು ಹುಂಡಿ ಕಳ್ಳತನ ಪ್ರಕರಣದ ಆರೋಪಿ ಬಂಧನ

ಹೊಸನಗರ : ಜೂನ್ 10ರಂದು ನಡೆದ ಎರಡು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಭದ್ರಾವತಿಯ ಭೋವಿ ಕಾಲೋನಿ ನಿವಾಸಿ ಮೂರ್ತಿ ವಿ ಅಲಿಯಾಸ್ ಕತ್ತೆಮೂರ್ತಿ (28) ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದು, ಅವನಿಂದ 60,000 ರೂಪಾಯಿ ಮೌಲ್ಯದ ಹೀರೋ ಹೊಂಡಾ ಸ್ಲ್ಪೆಂಡರ್ ಬೈಕ್ ಹಾಗೂ 1,100 ರೂಪಾಯಿ ವಶಕ್ಕೆ ಪಡೆದಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಶಂಕರಗೌಡ ಪಾಟೀಲ್ ನೇತೃತ್ವದ ಸಿಬ್ಬಂದಿ ಸತೀಶ್ ರಾಜ್, ಮಾಯಪ್ಪ ಗೋಕಾವಿ, ಸುನೀಲ್ ಹಾಗೂ ಸರ್ಕಲ್ ಇನ್ಸ್‌ಪೆಕ್ಟರ್ ಗೌಡಪ್ಪಗೌಡರ್ ಮಾರ್ಗದರ್ಶನದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆಯಿತು‌.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಪ್ರಕರಣದ ವಿವರ :

ಹೊಸನಗರ ಪಟ್ಟಣದ ನಗರ ರಸ್ತೆಯ ಗುರುಶಕ್ತಿ ಪೆಟ್ರೋಲ್ ಬಂಕ್ ಹತ್ತಿರ ಲಾಕ್ ಮಾಡಿ ನಿಲ್ಲಿಸಿದ್ದ ಬೈಕ್ ಕದ್ದ ಪ್ರಕರಣ ಮತ್ತು ನಗರದ ಪಕ್ಕದಲ್ಲಿರುವ ವೀರಾಂಜನೇಯ ಸ್ವಾಮಿ ದೇವಸ್ಥಾನದ ಬಾಗಿಲಿನ ಬೀಗ ಒಡೆಯುವ ಮೂಲಕ ಹುಂಡಿಯ ಹಣ ಕಳವು ಪ್ರಕರಣಗಳು ನಡೆದಿತ್ತು. ಈ ಪ್ರಕರಣಗಳ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿತ್ತು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]