ಅಪರಾಧ ಸುದ್ದಿ

ಹೊಸನಗರ : ಕಾರಾಗೃಹಕ್ಕೆ ಕರೆದೊಯ್ಯುವಾಗ ಸಿನಿಮೀಯ ರೀತಿಯಲ್ಲಿ ಆರೋಪಿ ಎಸ್ಕೇಪ್ !

ಹೊಸನಗರ ; ಇಲ್ಲಿನ ನ್ಯಾಯಾಲಯದಿಂದ ಕಾರಾಗೃಹಕ್ಕೆ ಕರೆದುಕೊಂಡು ಹೋಗುತ್ತಿದ್ದ ಆರೋಪಿಯೊಬ್ಬ ಅರಣ್ಯ ಇಲಾಖೆ ಸಿಬ್ಬಂದಿ ಕಣ್ತಪ್ಪಿಸಿ ಪರಾರಿಯಾದ ಘಟನೆ ಬುಧವಾರ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಕಳ್ಳಬೇಟೆ ಆರೋಪದಡಿ ತಾಲೂಕಿನ ಅಡುಗೋಡಿ ಗ್ರಾಮದ ವೆಂಕಟೇಶ (36) ಎಂಬಾತನನ್ನು ಅರಣ್ಯ ಸಿಬ್ಬಂದಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ನ್ಯಾಯಾಂಗ ಬಂಧನ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಜೀಪಿನಲ್ಲಿ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯುತ್ತಿದ್ದರು.

ಮಾರ್ಗ ಮಧ್ಯೆ ಬಟ್ಟೆಮಲ್ಲಪ್ಪ ಸರ್ಕಲ್ ಬಂದಾಗ ಹತ್ತಿರ ತೀವ್ರ ಹಸಿವಾಗುತ್ತಿದೆ ತಿನ್ನಲು ಏನಾದರೂ ಬೇಕು ಎಂದು ಆರೋಪಿ ಕೇಳಿಕೊಂಡಿದ್ದು, ಉಪವಲಯ ಅರಣ್ಯಾಧಿಕಾರಿ ಸುನಿಲ್ ಡಿ ಕುಂಬಾರ್ ಜೀಪಿನಿಂದ ಇಳಿದು ಹೋಟೆಲ್‌ಗೆ ಹೊರಟಿದ್ದರು. ಇದೇ ಸಮಯಕ್ಕೆ ಕಾದಿದ್ದ ವೆಂಕಟೇಶ್, ಜೀಪ್‌ನಲ್ಲಿ ತನ್ನ ಕಾವಲಿಗಿದ್ದ ಅರಣ್ಯ ವೀಕ್ಷಕ ಅಯಾನ್ ಹಾಗೂ ಚಕ್ರಪಾಣಿಯನ್ನ ಜೋರಾಗಿ ತಳ್ಳಿ, ಹಲ್ಲೆ ನಡೆಸಿ ಅಲ್ಲಿಂದ ಸಿನಿಮೀಯ ರೀತಿಯಲ್ಲಿ ಕಾಲ್ಕಿತ್ತಿದ್ದಾನೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಕೂಡಲೇ ಸುತ್ತಮುತ್ತಲ ಪ್ರದೇಶದಲ್ಲಿ ಸಾಕಷ್ಟು ಹುಡುಕಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಹೊಸನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ತಂಡ ರಚನೆ :

ಹೊಸನಗರ ಸರ್ಕಲ್ ಇನ್ಸ್‌ಪೆಕ್ಟರ್ ಗೌಡಪ್ಪ ಗೌಡರ್‌ ಮಾರ್ಗದರ್ಶನದಲ್ಲಿ ಸಬ್‌ ಇನ್ಸ್‌ಪೆಕ್ಟರ್ ಶಂಕರ ಗೌಡ ಪಾಟೀಲ್‌ರ ನೇತೃತ್ವದಲ್ಲಿ ಪೊಲೀಸ್ ತಂಡ ರಚಿಸಿ ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]