HOSANAGARA ; ಶ್ರೀಗಂಧದ ಮರಗಳನ್ನು ಅಕ್ರಮವಾಗಿ ಕಡಿದು ತುಂಡುಗಳಾಗಿ ತಯಾರಿಸಿ ಸಾಗಾಟ ಮಾಡುವಾಗ ಮಾಲು ಸಮೇತ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಸಬಾ ಹೋಬಳಿ ಕಚ್ಚಿಗೆಬೈಲು ಗ್ರಾಮದಿಂದ ಕಾನಗೋಡು ಹೋಗುವ ರಸ್ತೆಯಲ್ಲಿ ನಡೆದಿದೆ.
ಬಾಣಿಗ ಗ್ರಾಮದ ಹೊಸಕೆಸರೆ ನಿವಾಸಿ ಹನೀಫ್ ಬಿನ್ ಯಾಕೂಬ್ ಸಾಬ್ (48) ಬಂಧಿತ ಆರೋಪಿ. ಈತನಿಂದ 3.400 ಕೆ.ಜಿ ಹಸಿ ಗಂಧದ ಪೀಸ್ ಹಾಗೂ 3 ಗರಗಸಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ದಾಳಿಯಲ್ಲಿ ಪೊಲೀಸ್ ಅರಣ್ಯ ಸಂಚಾರಿ ದಳ ಸಾಗರ ಸಬ್ ಇನ್ಸ್‌ಪೆಕ್ಟರ್ ವಿನಾಯಕ ಹಾಗೂ ಅವರ ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳಾದ ವಲಯ ಅರಣ್ಯಧಿಕಾರಿ ಅನಿಲ್ ಕುಮಾರ್ ಎಸ್, ಡಿವೈಆರ್ಎಫ್ಒ ಅನಿಲ್ ಬೆಳ್ಳೆನವರ್, ರಾಘವೇಂದ್ರ ಗೌಡ, ಅರಣ್ಯ ರಕ್ಷಕ, ಪುಟ್ಟಸ್ವಾಮಿ, ರಮೇಶ್, ಸುರೇಶ್ ಇವರು ಪಾಲ್ಗೊಂಡಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.