Arecanut | ಕೊಳೆ ರೋಗದಿಂದ ಅಡಿಕೆ ಮರ ರಕ್ಷಣೆ ಕ್ರಮಗಳೇನು ?

Written by malnadtimes.com

Published on:

ARECANUT ; ಪ್ರಸ್ತುತ ಹೆಚ್ಚು ಮಳೆ, ಮೋಡಕವಿದ ವಾತಾವರಣ, ತೋಟದಲ್ಲಿ ನೀರು ನಿಲ್ಲುವಿಕೆ, ಹೆಚ್ಚಾದ ಮಣ್ಣಿನ ತೇವಾಂಶ, ಅಧಿಕ ಆಧ್ರತೆ (ಶೇ. 90 ಕ್ಕಿಂತ ಹೆಚ್ಚು) ಮತ್ತು ಸೂರ್ಯನ ಬೆಳಕಿನ ಕೊರತೆಯಿಂದ ಕೊಳೆ ರೋಗವು ಹೆಚ್ಚಿರುವುದರಿಂದ ಈ ಕೆಳಕಂಡ ಕ್ರಮಗಳನ್ನು ಅನುಸರಿಸಬೇಕು ಎಂದು ಡಾ. ನಾಗರಾಜಪ್ಪ ಅಡಿವಪ್ಪರ್, ಮುಖ್ಯಸ್ಥರು, ಅಡಿಕೆ ಸಂಶೋಧನಾ ಕೇಂದ್ರ ನವುಲೆ ಶಿವಮೊಗ್ಗ ಅವರು ಮಾಹಿತಿ ನೀಡಿದ್ದಾರೆ.

WhatsApp Group Join Now
Telegram Group Join Now
Instagram Group Join Now

ತೋಟಗಳಲ್ಲಿ ಹೆಚ್ಚಾಗಿ ನೀರು ನಿಲ್ಲದಂತೆ ಬಸಿಗಾಲುವೆ ಚೊಕ್ಕ ಮಾಡಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡುವುದು. ಕೊಳೆ ಬಾಧಿತ ಬಿದ್ದಂತಹ ಕಾಯಿಗಳನ್ನು ಆರಿಸಿ ಹೊರಗಡೆ ಹಾಕಬೇಕು. ಗಾಳಿ ಆಡುವಂತೆ ಮಾಡಲು ಅಂತರ ಬೆಳೆಗಳ ಹಾಗೂ ತೋಟದ ಅಂಚಿನ ಮರಗಳ ಹೆಚ್ಚುವರಿ ರೆಂಬೆಗಳನ್ನು ಕತ್ತರಿಸಿ ತೆಗೆಯುವುದು. ವೈಜ್ಞಾನಿಕವಾಗಿ ತಯಾರಿಸಿದ ರಸಸಾರ (pH) 7ರ ಶೇ.1 ರ ಬೋರ್ಡೋದ್ರಾವಣ ಅಥವಾ ಶೇ.0.2 ರ ಮೆಟಲಾಕ್ಸಿಲ್ ಎಂ.ಜಡ್ (2 ಗ್ರಾಂ 1 ಪ್ರತಿ ಲೀ. ನೀರಿನಲ್ಲಿ ಕರಗಿಸಿ) ಅಥವಾ ಶೇ.0.2 ರ ಮೆಟಲಾಕ್ಸಿಲ್ + ಮ್ಯಾಂಕೋಜೆಬ್ (2 ಗ್ರಾಂ 1 ಪ್ರತಿ ಲೀ. ನೀರಿನಲ್ಲಿ ಕರಗಿಸಿ) ಅಥವಾ ಶೇ. 0.1 ರ ಮ್ಯಾಂಡಿಪ್ರ‍ೇಪಮಿಡ್ (1 ಮಿ.ಲಿ ಪ್ರತಿ ಲೀ. ನೀರಿನಲ್ಲಿ) ಅಥವಾ ಶೇ. 0.3 ರ ತಾಮ್ರದ ಆಕ್ಸಿಕ್ಲೋರೈಡ್ (3 ಗ್ರಾಂ 1 ಪ್ರತಿ ಲೀ. ನೀರಿನಲ್ಲಿ ಕರಗಿಸಿ) ದಿಂದ ಗೊನೆಗಳಿಗೆ ಹಾಗೂ ಎಲೆಗಳಿಗೆ ಮತ್ತು ಸುಳಿಭಾಗಕ್ಕೆ ಚೆನ್ನಾಗಿ ನೆನೆಯುವಂತೆ ಸೂಕ್ತ ಅಂಟಿನೊಂದಿಗೆ (ರಾಳ) ಸಿಂಪರಣೆ ಮಾಡಿ.

ಹೀಗೆ ಮಾಡುವುದರಿಂದ ಕೊಳೆರೋಗದ ಜೊತೆಗೆ ಎಲೆಚುಕ್ಕೆ ರೋಗವನ್ನು ನಿಯಂತ್ರಿಸಲು ಸಹಾಯವಾಗುತ್ತದೆ. ಈ ಮೇಲಿನ ಕ್ರಮಗಳನ್ನು ಸಾಮೂಹಿಕವಾಗಿ ಏಕಕಾಲದಲ್ಲಿ ಅನುಸರಿಸಿದಲ್ಲಿ ಮರಗಳನ್ನು ಸುಳಿಕೊಳೆ ಅಥವಾ ಶಿರಕೊಳೆಯಿಂದ ಸಾಯುವುದನ್ನು ತಪ್ಪಿಸಬಹುದಾಗಿದೆ.

Leave a Comment