ಸಾಗರ

ಸಾಗರ : ಅಕ್ರಮ ಗಣಿಗಾರಿಕೆಗೆ ಬ್ರೇಕ್, ಅಧಿಕಾರಿಗಳ ದಾಳಿ ವೇಳೆ ಕಾರ್ಮಿಕರು ಪರಾರಿ

ಸಾಗರ ತಾಲೂಕಿನ ಕಾನ್ಲೆ ಗ್ರಾಮದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಜಂಬಿಟ್ಟಿಗೆ ಕಲ್ಲು ಕ್ವಾರಿ ಮೇಲೆ ತಹಶೀಲ್ದಾರ್ ಡಾ. ಪ್ರತಿಭಾ ಆರ್ ದಿಢೀರ್ ದಾಳಿ ನಡೆಸಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಬರುತ್ತಿದ್ದಂತೆ ಕಾರ್ಮಿಕರು ಪರಾರಿಯಾಗಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದ ಜೆಸಿಬಿಯನ್ನು ಬೆನ್ನಟ್ಟಿ ವಶಕ್ಕೆ ಪಡೆಯಲಾಗಿದೆ.

ಸಾಗರ : ಅಕ್ರಮ ಗಣಿಗಾರಿಕೆಗೆ ಬ್ರೇಕ್, ಅಧಿಕಾರಿಗಳ ದಾಳಿ ವೇಳೆ ಕಾರ್ಮಿಕರು ಪರಾರಿ – MT

ಸಾಗರ: ತಾಲೂಕಿನ ತಾಳಗುಪ್ಪ ಹೋಬಳಿ ವ್ಯಾಪ್ತಿಯ ಕಾನ್ಲೆ ಗ್ರಾಮದ ಸರ್ವೆ ನಂಬರ್ 123ರಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಜಂಬಿಟ್ಟಿಗೆ ಕಲ್ಲು ಕ್ವಾರಿ ಮೇಲೆ ಸಾಗರ ತಹಶೀಲ್ದಾರ್ ಡಾ. ಪ್ರತಿಭಾ ಆರ್ ದಿಢೀರ್ ದಾಳಿ ನಡೆಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಸಾರ್ವಜನಿಕರಿಂದ ಬಂದ ಖಚಿತ ದೂರಿನ ಮೇರೆಗೆ ಹಿಡುವಳಿ ಜಮೀನಿನಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಅಧಿಕಾರಿಗಳ ಜೀಪ್ ಸ್ಥಳಕ್ಕೆ ಬರುತ್ತಿದ್ದಂತೆ ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 7ರಿಂದ 8 ಮಂದಿ ಕಾರ್ಮಿಕರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ವೇಳೆ ಸ್ಥಳದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಜೆಸಿಬಿ ಯಂತ್ರವನ್ನು ಅಧಿಕಾರಿಗಳು ಬೆನ್ನಟ್ಟಿ ವಶಕ್ಕೆ ಪಡೆದಿದ್ದಾರೆ. ಅಕ್ರಮ ಗಣಿಗಾರಿಕೆ ಸಂಬಂಧ ಕಠಿಣ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

ದಾಳಿಯ ಸಂದರ್ಭದಲ್ಲಿ ಗ್ರಾಮ ಆಡಳಿತಾಧಿಕಾರಿ ಎಂ.ಜಿ. ನಾಯಕ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸಾಗರ ತಾಲೂಕಿನಲ್ಲಿ ತಹಶೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಡಾ. ಪ್ರತಿಭಾ ಆರ್ ಅವರು ಅಕ್ರಮ ಮರಳು ದಂಧೆ, ಕಲ್ಲು ಕ್ವಾರಿ ಮತ್ತು ಸರ್ಕಾರಿ ಭೂ ಒತ್ತುವರಿ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆರಂಭಿಕ ದಿನಗಳಲ್ಲಿ ಮಾತ್ರ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಸಾರ್ವಜನಿಕ ಅಭಿಪ್ರಾಯಕ್ಕೆ ಭಿನ್ನವಾಗಿ, ಅವರು ಸತತ ದಾಳಿಗಳ ಮೂಲಕ ಅಕ್ರಮ ದಂಧೆಕೋರರಿಗೆ ಎಚ್ಚರಿಕೆ ನೀಡಿದ್ದಾರೆ.

ಸ್ಥಳೀಯರ ಪ್ರಕಾರ, ಮಳೆಗಾಲದ ನಡುವೆಯೂ ಅಕ್ರಮ ಕಲ್ಲು ಕ್ವಾರಿಗಳಿಂದ ಭಾರಿ ಟಿಪ್ಪರ್ ಮತ್ತು ಲಾರಿಗಳು ಸಂಚರಿಸುತ್ತಿರುವುದರಿಂದ ಗ್ರಾಮೀಣ ರಸ್ತೆಗಳು ಹಾಳಾಗಿವೆ. ಇದರಿಂದ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳ ಓಡಾಟಕ್ಕೂ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಪರಿಸರ ನಾಶದ ಜೊತೆಗೆ ಸಾರ್ವಜನಿಕ ರಸ್ತೆಗಳಿಗೂ ಹಾನಿ ಉಂಟುಮಾಡುತ್ತಿರುವ ಇಂತಹ ಅಕ್ರಮ ಕಲ್ಲು ಗಣಿಗಾರಿಕೆಗೆ ಶಾಶ್ವತ ಬ್ರೇಕ್ ಹಾಕಬೇಕು ಎಂದು ಸ್ಥಳೀಯರು ತಾಲೂಕು ಆಡಳಿತವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ತಹಶೀಲ್ದಾರ್ ಡಾ. ಪ್ರತಿಭಾ ಆರ್ ಖಡಕ್ ಎಚ್ಚರಿಕೆ ನೀಡಿದ್ದು, ಸಾಗರ ತಾಲೂಕಿನ ಯಾವುದೇ ಭಾಗದಲ್ಲೂ ಅಕ್ರಮ ಕಲ್ಲು ಅಥವಾ ಮರಳು ಗಣಿಗಾರಿಕೆಯನ್ನು ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

“ಎಷ್ಟೇ ಪ್ರಭಾವಿಗಳಾಗಿದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸರ್ಕಾರದ ಆಸ್ತಿ ಮತ್ತು ನೈಸರ್ಗಿಕ ಸಂಪತ್ತನ್ನು ರಕ್ಷಿಸಲು ನಿರಂತರ ದಾಳಿ ಮುಂದುವರಿಯಲಿದೆ. ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650