ತೀರ್ಥಹಳ್ಳಿ

ಆಗುಂಬೆ ಘಾಟಿಯಲ್ಲಿ 150 ಅಡಿ ಕಂದಕಕ್ಕೆ ಉರುಳಿದ ಲಾರಿ; ಮೂರು ಗಂಟೆ ಕಾರ್ಯಾಚರಣೆ ಬಳಿಕ ಚಾಲಕನ ರಕ್ಷಣೆ

ಆಗುಂಬೆ ಘಾಟಿಯ ಎರಡನೇ ತಿರುವಿನಲ್ಲಿ ಬಾಳೆಕಾಯಿ ಸಾಗಿಸುತ್ತಿದ್ದ ಲಾರಿ ಸುಮಾರು 150 ಅಡಿ ಕಂದಕಕ್ಕೆ ಉರುಳಿದೆ. ಕ್ಯಾಬಿನ್‌ನಲ್ಲಿ ಸಿಲುಕಿದ್ದ ಚಾಲಕನನ್ನು ಮೂರು ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಿಸಲಾಗಿದೆ.

ಆಗುಂಬೆ ಘಾಟಿಯಲ್ಲಿ 150 ಅಡಿ ಕಂದಕಕ್ಕೆ ಉರುಳಿದ ಲಾರಿ; ಮೂರು ಗಂಟೆ ಕಾರ್ಯಾಚರಣೆ ಬಳಿಕ ಚಾಲಕನ ರಕ್ಷಣೆ – agumbe accident

ಆಗುಂಬೆ: ಶಿವಮೊಗ್ಗದಿಂದ ಉಡುಪಿಗೆ ಬಾಳೆಕಾಯಿ ಸಾಗಿಸುತ್ತಿದ್ದ ಲಾರಿಯೊಂದು ಆಗುಂಬೆ ಘಾಟಿಯ ಎರಡನೇ ತಿರುವಿನಲ್ಲಿ ನಿಯಂತ್ರಣ ತಪ್ಪಿ ಸುಮಾರು 150 ಅಡಿ ಆಳದ ಕಂದಕಕ್ಕೆ ಉರುಳಿದೆ. ಲಾರಿಯ ಕ್ಯಾಬಿನ್‌ನಲ್ಲಿ ಸಿಲುಕಿದ್ದ ಚಾಲಕನನ್ನು ಸ್ಥಳೀಯರು ಸುಮಾರು ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿ ಹೊರತೆಗೆದಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಹುಬ್ಬಳ್ಳಿ ಮೂಲದ ಗುಡ್ಡಪ್ಪ ಮಡಿವಾಳ ಗಾಯಗೊಂಡ ಚಾಲಕ. ಅವರೊಂದಿಗೆ ಕ್ಲೀನರ್ ರವಿ ಕೂಡ ಪ್ರಯಾಣಿಸುತ್ತಿದ್ದರು. ರಾತ್ರಿ ಸುಮಾರು 12 ಗಂಟೆಗೆ ಆಗುಂಬೆ ಘಾಟಿಯಲ್ಲಿ ಈ ಅಪಘಾತ ಸಂಭವಿಸಿದೆ.

ಹೊರಗೆ ಜಿಗಿದು ನೆರವಿಗಾಗಿ ಕರೆ ಮಾಡಿದ ಕ್ಲೀನರ್

ಲಾರಿ ಕಂದಕಕ್ಕೆ ಉರುಳುವ ಸಂದರ್ಭದಲ್ಲಿ ಕ್ಲೀನರ್ ರವಿ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಪರಿಚಯಸ್ಥರಿಗೆ ದೂರವಾಣಿ ಕರೆ ಮಾಡಿ ಅಪಘಾತದ ಮಾಹಿತಿ ನೀಡಿ ನೆರವು ಕೋರಿದ್ದಾರೆ.

ಕಂದಕಕ್ಕೆ ಬಿದ್ದ ಲಾರಿಯ ಕ್ಯಾಬಿನ್ ನಜ್ಜುಗುಜ್ಜಾಗಿದ್ದು, ಚಾಲಕ ಗುಡ್ಡಪ್ಪ ಅವರ ಎರಡೂ ಕಾಲುಗಳು ಕಬ್ಬಿಣದ ಚೌಕಟ್ಟಿನ ನಡುವೆ ಸಿಲುಕಿಕೊಂಡಿದ್ದವು. ಇದರಿಂದ ಅವರಿಗೆ ಹೊರಬರಲು ಸಾಧ್ಯವಾಗಿರಲಿಲ್ಲ.

ಮೂರು ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆ

ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಸ್ಥಳೀಯರು ಚಾಲಕನನ್ನು ಹೊರತೆಗೆಯಲು ಪ್ರಯತ್ನ ಆರಂಭಿಸಿದ್ದಾರೆ. ಸುಮಾರು ಮೂರು ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕ ಕ್ಯಾಬಿನ್‌ನಲ್ಲಿ ಸಿಲುಕಿದ್ದ ಗುಡ್ಡಪ್ಪ ಅವರನ್ನು ಹೊರತೆಗೆದಿದ್ದಾರೆ.

ತೀವ್ರವಾಗಿ ಗಾಯಗೊಂಡಿರುವ ಅವರನ್ನು ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

error: Content is protected !!