ರಿಪ್ಪನ್‌ಪೇಟೆ ; ಕನ್ನಡದ ಮೊದಲ ಕವಯಿತ್ರಿ ಅಕ್ಕಮಹಾದೇವಿ. ಅವರ ವಚನದಲ್ಲಿ ನಡೆ-ನುಡಿ ಇಂದಿನ ಬದುಕಿಗೆ ದಾರಿದೀಪ. 12ನೇ ಶತಮಾನದಲ್ಲಿ ವರ್ಗ, ವರ್ಣ ಭೇದ ಭಾವನೆಯಿಲ್ಲದೆ ಸರ್ವಜನಾಂಗದವರನ್ನು ನಮ್ಮವರು ಎಂಬ ಭಾವನೆಯಲ್ಲಿ ಬಸವಣ್ಣನವರು ಜಾತ್ಯಾತೀತವಾಗಿ ಸರ್ವಕಾಲಕ ನಾಯಕರಾಗಿ ಉಳಿಯುತ್ತಾರೆಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಹೇಳಿದರು.
ರಿಪ್ಪನ್‌ಪೇಟೆಯ ಶ್ರೀಬಸವೇಶ್ವರ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಖಿಲಭಾರತ ಶರಣ ಸಾಹಿತ್ಯ ಪರಿಷತ್ ಮೈಸೂರು, ಶಿವಮೊಗ್ಗ ಜಗದ್ಗುರು ಗುರುಬಸವೇಶ್ವರ ವಿದ್ಯಾಪೀಠ ಹೊಸನಗರ ತಾಲ್ಲೂಕು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಘಟಕ ರೋಟರಿ ಕ್ಲಬ್ ಹಾಗೂ ಕದಳಿ ಮಹಿಳಾ ವೇದಿಕೆ ಹೊಸನಗರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ಹೊಸನಗರ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಚನ ಪ್ರತಿಭೋತ್ಸವ ಸ್ಪರ್ಧೆಗಳ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿ, ಬೈಬಲ್‌ಗಿಂತ ವಚನ ಸಾಹಿತ್ಯಕ್ಕೆ ಹೆಚ್ಚಿನ ಶಕ್ತಿಯಿದೆ. ವಿಶ್ವ ಜಾಗತಿಕ ಮಟ್ಟದಲ್ಲಿ ಬಸವಣ್ಣನವ ವಚನಗಳು ಶ್ರೇಷ್ಟವಾಗುವ ಮೂಲಕ ವಿಶ್ವಗುರುವಾಗಲು ಸಾಧ್ಯವಾಗಿದೆ ಎಂದರು.
ಹೊಸನಗರ ತಾಲ್ಲೂಕು ಅಖಿಲಭಾರತ ಶರಣ ಸಾಹಿತ್ಯ ಪರಿಷತ್ ಘಟಕದ ಅಧ್ಯಕ್ಷೆ ಶಶಿಕಲಾ ಮಲ್ಲಪ್ಪ ಆಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಅಧ್ಯಕ್ಷ ರೋ. ಕೃಷ್ಣರಾಜ್ ಎ.ಎಂ. ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಸಂಸ್ಥಾಪಕ ಅಧ್ಯಕ್ಷ ಎಂ.ಬಿ.ಲಕ್ಷ್ಮಣ ಗೌಡ, ಕಾರ್ಯದರ್ಶಿ ರವಿ ಬಲ್ಲಾಳ್, ಎಸ್.ಜೆ.ಜಿ. ವಿದ್ಯಾಪೀಠದ ನಿರ್ದೇಶಕ ಎಲ್.ವೈ. ದಾನೇಶಪ್ಪ ಲಕ್ಕವಳ್ಳಿ, ಹೆಚ್.ಎಂ. ವರ್ತೇಶ್ ಹುಗುಡಿ, ಎಂ.ಡಿ. ಇಂದ್ರಮ್ಮ ಕೆ.ಆರ್.ಭೀಮರಾಜ್, ಜೆ.ಜಿ.ಸದಾನಂದ , ಶ್ರೀಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಈಶ್ವರ ಮಳಕೊಪ್ಪ, ಶ್ರೀಬಸವೇಶ್ವರ ಹಿರಿಯ ಪ್ರಾಥಮಿಕ ಪಾಠಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಉಮೇಶ ಕಾಂಬ್ಳೆ, ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಗುರುಪ್ರಸಾದ್, ಶ್ರೀ ಬಸವೇಶ್ವರ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಕೆ.ಎನ್.ಚಂದ್ರಪ್ಪ ಮತ್ತಿತರರು ಇದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





