Featured

ಮಳೆಗಾಲ ಪ್ರಾರಂಭ ; ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಲು ಹೊಸನಗರ ತಹಸೀಲ್ದಾರ್ ಭರತ್‌ರಾಜ್ ಸೂಚನೆ

ಹೊಸನಗರ ; ರಾಜ್ಯದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಮುಂದಿನ ದಿನಗಳಲ್ಲಿ ಭಾರಿ ಮಳೆಯಿಂದ ನದಿಯಲ್ಲಿ ಹೆಚ್ಚಿನ ನೀರು ಬಂದು ಪ್ರವಾಹದ ಭೀತಿ ಇರುವ ಹಿನ್ನೆಲೆಯಲ್ಲಿ, ಅದು ಅಲ್ಲದೇ ಶಾಲೆ-ಕಾಲೇಜು ಮಕ್ಕಳು ಗ್ರಾಮಾಂತರ ಪ್ರದೇಶದಿಂದ ಹಳ್ಳ-ಕೊಳ್ಳಗಳನ್ನು ದಾಟಿ ಬರುವ ಸಂಭವವಿರುವುದರಿಂದ ಅನಾಹುತಗಳನ್ನು ತಪ್ಪಿಸಲು ಈಗಾಗಲೇ ತಾಲೂಕಿನ ಗ್ರಾಮ ಪಂಚಾಯತಿಗಳಿಗೆ ಒಬ್ಬರಂತೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ತಹಸೀಲ್ದಾರ್ ಭರತ್‌ರಾಜ್ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಅದರಂತೆ ಸಾರ್ವಜನಿಕರು ಯಾವುದೇ ಅಪಾಯ/ಅನಾಹುತಗಳು ಸಂಭವಿಸಿದ್ದಲ್ಲಿ ತಾಲ್ಲೂಕು ಆಡಳಿತದ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ 9741621135ಗೆ ಸಂಪರ್ಕಿಸಲು ಹಾಗೂ ಸಂಬಂಧಪಟ್ಟ ಪಿಡಿಒ ಹಾಗೂ ಗ್ರಾಮ ಆಡಳಿತಾಧಿಕಾರಿಗಳನ್ನು ಸಂಪರ್ಕಿಸಬೇಕೆಂದು ತಿಳಿಸಿದ್ದು, ಮೂರು ತಿಂಗಳುಗಳ ಕಾಲ ಎಲ್ಲ ಅಧಿಕಾರಿಗಳು ಸ್ಥಳೀಯವಾಗಿ ವಾಸವಿದ್ದು ಮಳೆಯಿಂದ ಅಲ್ಲಲ್ಲಿ ನಡೆಯುವ ಅನಾಹುತಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ‌.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]