ಹೊಸನಗರ

ಹುಲಿಕಲ್ ಘಾಟ್‌ನಲ್ಲಿ ಅದಲು-ಬದಲು ಸಂಚಾರ ವ್ಯವಸ್ಥೆ ಜಾರಿ !

ಹೊಸನಗರ ; ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಬಾಳೆಬರೆ (ಹುಲಿಕಲ್) ಘಾಟ್‌ನಲ್ಲಿ ಭೂಕುಸಿತ ಉಂಟಾಗಿ ರಸ್ತೆ ಸಂಪರ್ಕ ಕಡಿತಗೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಹಿತದೃಷ್ಟಿಯಿಂದ ಬಸ್ ಪ್ರಯಾಣಿಕರಿಗೆ ಅದಲು-ಬದಲು ವ್ಯವಸ್ಥೆ ಮೂಲಕ ಸಂಚರಿಸಲು ಜಿಲ್ಲಾಡಳಿತ ತಾತ್ಕಾಲಿಕ ಅನುಮತಿ ನೀಡಿದ್ದು, ಈ ಕುರಿತು ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ಅವರು ಅಧಿಸೂಚನೆ ಹೊರಡಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಏನಿದು ಅದಲು-ಬದಲು ವ್ಯವಸ್ಥೆ ?

📢 Stay Updated! Join our WhatsApp Channel Now →

ಶಿವಮೊಗ್ಗ-ಹೊಸನಗರ ಮಾರ್ಗವಾಗಿ ಕುಂದಾಪುರಕ್ಕೆ ಚಲಿಸುವ ಬಸ್‌ಗಳು ಘಾಟ್‌ನ ಚಂಡಿಕಾ ದೇವಸ್ಥಾನದವರೆಗೆ ಸಂಚರಿಸಲಿವೆ. ಅಲ್ಲಿ ಪ್ರಯಾಣಿಕರು ಬಸ್‌ನಿಂದ ಇಳಿದು ಸುಮಾರು 85 ಮೆಟ್ಟಿಲುಗಳನ್ನು ಕಾಲ್ನಡಿಗೆಯಲ್ಲಿ ಕ್ರಮಿಸುವ ಮೂಲಕ ಗುಡ್ಡ ಕುಸಿತವಾದ ಜಾಗವನ್ನು ದಾಟಿ, ಕೆಳಭಾಗದಲ್ಲಿ ಸಿದ್ಧಪಡಿಸಲಾಗಿರುವ ಪರ್ಯಾಯ ನಿಲುಗಡೆ ತಾಣಕ್ಕೆ ತಲುಪಬೇಕಾಗುತ್ತದೆ. ಅಲ್ಲಿಂದ ಕುಂದಾಪುರ ಕಡೆಯಿಂದ ಬರುವ ಮತ್ತೊಂದು ಬಸ್‌ನ ಮೂಲಕ ಪ್ರಯಾಣ ಮುಂದುವರಿಸಲು ಅವಕಾಶ ಕಲ್ಪಿಸಲಾಗಿದೆ.

ಈ ವ್ಯವಸ್ಥೆಯು ಕೇವಲ ಸಾರ್ವಜನಿಕ ಸಾರಿಗೆ (ಸ್ಟೇಜ್ ಕ್ಯಾರೇಜ್) ವಾಹನಗಳಿಗೆ ಮಾತ್ರ ಅನ್ವಯಿಸಲಿದೆ. ಮೆಟ್ಟಿಲುಗಳು ಕಿರಿದಾಗಿರುವುದರಿಂದ ಕೇವಲ ದೈಹಿಕವಾಗಿ ಸದೃಢವಾಗಿರುವ ಪ್ರಯಾಣಿಕರಿಗೆ ಮಾತ್ರ ಈ ಮಾರ್ಗದಲ್ಲಿ ಸಂಚರಿಸಲು ಅವಕಾಶ ನೀಡಬೇಕು. ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸ್ಥಳದಲ್ಲಿ ಸೂಕ್ತ ವೈದ್ಯಕೀಯ ವ್ಯವಸ್ಥೆ ಇರಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಮಳೆಗಾಲ ಆರಂಭವಾಗಲಿರುವುದರಿಂದ ಪ್ರಯಾಣಿಕರ ಸುರಕ್ಷತೆಗಾಗಿ ಮೆಟ್ಟಿಲುಗಳನ್ನು ತಕ್ಷಣವೇ ದುರಸ್ತಿಗೊಳಿಸಿ ಹ್ಯಾಂಡ್ ರೈಲ್‌ಗಳನ್ನು ಅಳವಡಿಸಲು ಲೋಕೋಪಯೋಗಿ ಇಲಾಖೆಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಭೂಕುಸಿತ ಸಂಭವಿಸಿದ ಅಪಾಯಕಾರಿ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ. ನಿಗದಿತ ಸಮಯ ಮತ್ತು ನಿರ್ದಿಷ್ಟ ಆಸನ ಸಾಮರ್ಥ್ಯವುಳ್ಳ 35 ಆಸನಗಳ ವಾಹನಗಳಿಗೆ ಮಾತ್ರ ಈ ಬದಲಾವಣೆ ವ್ಯವಸ್ಥೆ ಅಡಿಯಲ್ಲಿ ಸಂಚರಿಸಲು ಅನುಮತಿಸಲಾಗಿದೆ.

ಬಾಳೆಬರೆ ಘಾಟ್ ವ್ಯಾಪ್ತಿಯಲ್ಲಿ ರಕ್ಷಣಾತ್ಮಕ ಕಾಮಗಾರಿಗಳು ಪೂರ್ಣಗೊಳ್ಳುವವರೆಗೆ ಅಥವಾ ಮುಂದಿನ ಆದೇಶದವರೆಗೆ ಈ ತಾತ್ಕಾಲಿಕ ವ್ಯವಸ್ಥೆಯು ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>