KOPPA ; ಆಂಬುಲೆನ್ಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಿಲುವಾಗಿಲು ಬಳಿ ನಡೆದಿದೆ.
ಮೃತನನ್ನು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೊನಲೆ ಗ್ರಾಮದ ಪ್ರವೀಣ್ (30) ಎಂದು ಗುರುತಿಸಲಾಗಿದೆ.
ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಸೇರಿದ ಆಂಬುಲೆನ್ಸ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.